×
Ad

ಚೂರಿ ಇರಿತಕ್ಕೊಳಗಾದ ಕಣ್ಣೂರಿನ ನೌಶಾದ್‌ನ ಆರೋಗ್ಯ ವಿಚಾರಿಸಿದ ಶಾಸಕ ಐವನ್ ಡಿಸೋಜ

Update: 2025-05-04 18:10 IST

ಮಂಗಳೂರು: ನಗರ ಹೊರವಲಯದ ಅಡ್ಯಾರ್ ಕಣ್ಣೂರ್‌ನಲ್ಲಿ ಮೇ 2ರಂದು ಮುಂಜಾವ ದುಷ್ಕರ್ಮಿ ಗಳಿಂದ ಚೂರಿ ಇರಿತಕ್ಕೊಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಣ್ಣೂರಿನ ನೌಶಾದ್‌ರನ್ನು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ರವಿವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಕುಟುಂಬಸ್ಥರಿಗೆ ಧೈರ್ಯ ತುಂಬಿದ ಐವನ್ ಡಿಸೋಜ ರಾಜ್ಯ ಸರಕಾರದಿಂದ ಸಿಗುವ ಪರಿಹಾರವನ್ನು ಶೀಘ್ರ ಬಿಡುಗಡೆಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ಮಾಜಿ ಮೇಯರ್ ಕೆ. ಅಶ್ರಫ್, ಇಮ್ರಾನ್ ಕುದ್ರೋಳಿ, ಸಲೀಂ ಮಕ್ಕ, ಸಾಲೀಹ್ ಬಜ್ಪೆ, ನವಾಝ್ ಜೆಪ್ಪು, ಹಬೀಬುಲ್ಲಾ ಕಣ್ಣೂರು, ಮಾಜಿ ಕಾರ್ಪೊರೇಟರ್ ಭಾಸ್ಕರ ರಾವ್, ನಝೀರ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News