×
Ad

ಬೆಳ್ತಂಗಡಿ ಶಾಸಕರಿಂದ ದ್ವೇಷ ಭಾಷಣ: ಎಸ್‌ಡಿಪಿಐ ಖಂಡನೆ

Update: 2025-05-04 22:40 IST

ಹರೀಶ್ ಪೂಂಜಾ

ಬೆಳ್ತಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೋಮು ಪ್ರಚೋದನಕಾರಿ ಭಾಷಣ ಮಾಡಿರುವುದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ತೀವ್ರವಾಗಿ ಖಂಡಿಸಿದ್ದಾರೆ.

ತೆಕ್ಕಾರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಲೈಟನ್ನು ಹೊಡೆದು ಹಾಕುತ್ತಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ಊರಿನ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಮತ್ತು ಕೋಮು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಘಟನೆ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ನಡೆದಿದೆ. ಪ್ರಚೋದನಕಾರಿ ಭಾಷಣವನ್ನೆ ತನ್ನ ರಾಜಕೀಯ ಬಂಡವಾಳವನ್ನಾಗಿ ಉಪಯೋಗಿಸುವ ಶಾಸಕ ಹರೀಶ್ ಪೂಂಜಾ ತೆಕ್ಕಾರು ಪ್ರದೇಶದ ಜನರನ್ನು ಪ್ರಚೋದಿಸುವ ತನ್ನ ದುಷ್ಟ ಪ್ರಯತ್ನವು ಅತ್ಯಂತ ಖಂಡನೀಯ.

ತೆಕ್ಕಾರಿನಲ್ಲಿ ಹಿಂದೂ ಮುಸ್ಲಿಮರು ಪರಸ್ಪರ ಅನ್ಯೋನ್ಯತೆಯಿಂದ ಜೀವಿಸುತ್ತಿದ್ದು ಇದನ್ನು ಸಹಿಸಲು ಸಾಧ್ಯವಾಗದ ಶಾಸಕರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮ ವನ್ನು ದುಷ್ಪ್ರಯೋಗ ಮಾಡಿಕೊಂಡು ಪ್ರಚೋದನಕಾರಿ ಭಾಷಣ ಮಾಡಿ ಭಕ್ತಾಧಿಗಳನ್ನು ಕೆರಳಿಸುವಂತ ಪ್ರಯತ್ನ ಮಾಡಿರುವಂತದ್ದು ಧಾರ್ಮಿಕ ಕಾರ್ಯಕ್ರಮಕ್ಕೆ ಮಾಡಿರುವ ಅವಮಾನವಾಗಿರುತ್ತದೆ. ಪ್ರಚೋದನಕಾರಿ ಭಾಷಣ ಮಾಡುವ ತನ್ನ ಕೆಟ್ಟ ಚಾಲಿಯನ್ನು ಧಾರ್ಮಿಕ ಕಾರ್ಯಕ್ರಮಗಳನ್ನು ಬಳಸಿ ಕೊಳ್ಳುವುದು ಓರ್ವ ಜನಪ್ರತಿನಿಧಿಗೆ ಶೋಭೆ ತರುವಂತದ್ದಲ್ಲ. ಇದರಿಂದಾಗಿ ಧಾರ್ಮಿಕ ಕಾರ್ಯಕ್ರಮ ಗಳಿಗೆ ಬರುವ ಭಕ್ತಾಧಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದಂತಾಗುತ್ತದೆ. ಕೋಮು ವಿಷ ಕಾರುವ ಭಾಷಣಗಳನ್ನು ಮಾಡುವ ಪೂಂಜಾರಂತವರನ್ನು ಇಂತಹ ಕಾರ್ಯಕ್ರಮಗಳಿಂದ ದೂರ ಇಡುವಂತಹ ಕೆಲಸವನ್ನು ಹಿಂದೂ ಧಾರ್ಮಿಕ ಮುಖಂಡರು ಮಾಡಬೇಕಾಗಿದೆ ಎಂದು ಅವರು ಆಗ್ರಹಿಸಿದ್ದಾರೆ.

ಗೃಹ ಸಚಿವರು ಜಿಲ್ಲೆಗೆ ಆಗಮಿಸಿ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಉನ್ನತ ಅಧಿಕಾರಿಗಳ ಸಭೆ ನಡೆಸಿ ಹೋದರು ಪ್ರಚೋದನಕಾರಿ ಭಾಷಣಗಳಿಗೆ ಯಾವುದೇ ಕಡಿವಾಣ ಹಾಕಲು ಇಲ್ಲಿನ ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರಕಾರ ಮತ್ತು ಪೊಲೀಸ್ ಇಲಾಖೆ ತೆಕ್ಕಾರಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾರ ಮೇಲೆ ಕೇಸು ದಾಖಲಿಸಿ ತಕ್ಷಣ ಬಂಧಿಸಬೇಕು ಇಲ್ಲವಾದರೆ ಮುಂದೆ ನಡೆಯುವ ಎಲ್ಲಾ ಅನಾಹುತಗಳಿಗೆ ಸರಕಾರವೆ ಹೊಣೆಯಾಗಿರುತ್ತದೆ. ಶಾಸಕರು ಪ್ರಚೋದನಕಾರಿ ಭಾಷಣ ತನ್ಮ ಕೆಟ್ಟ ಚಾಳಿಯನ್ನು ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ಸರ್ವಧರ್ಮದ ಶಾಂತಿ ಪ್ರಿಯರನ್ನು ಒಟ್ಟು ಸೇರಿಸಿ ತಕ್ಕ ಪಾಠ ಕಲಿಸಲಿದ್ದೇವೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News