×
Ad

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2025-05-06 22:33 IST

ಮಂಗಳೂರು, ಮೇ 6: ನಗರದ ಬೊಂದೇಲ್ ಸರಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಆ್ಯಂಡ್ ಇನ್‌ಫಾರಮೇಶನ್ ಸೈನ್ಸ್ ಕೋರ್ಸ್‌ಗಳಿಗೆ ಸೇರಲು ಎಸೆಸ್ಸೆಲ್ಸಿ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಡಿಪ್ಲೊಮಾ ಸೇರಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಪಡೆಯಲು ಹಾಗೂ ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ ಅಥವಾ ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಬೊಂದೇಲ್ ಸರಕಾರಿ ಮಹಿಳಾ ಪಾಲಿಟೆಕ್ನಿಕ್ (ದೂ.ಸಂ:0824-2482334/ 9611320910/9844744845)ನ್ನು ಸಂಪರ್ಕಿಸಿ ನೇರವಾಗಿ ಅರ್ಜಿ ಸಲ್ಲಿಸಬೇಕು ಎಂದು ಬೋಂದೆಲ್ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News