×
Ad

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ: ನೂತನ ಅಧ್ಯಕ್ಷರಾಗಿ ರವಿರಾಜ ಹೆಗ್ಡೆ

Update: 2025-05-06 23:07 IST

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೈನುಗಾರರ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಸಹಕಾರಿ ರತ್ನ ಡಾ.ಎಂ. ಎನ್. ರಾಜೇಂದ್ರಕುಮಾರ್ ನೇತೃತ್ವದ ಹೈನುಗಾರರ ಬಳಗದ ರವಿರಾಜ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್. ಕೋಟ್ಯಾನ್ ಅವಿರೋಧವಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷ ರವಿರಾಜ್ ಹೆಗ್ಡೆ ಅವರು ಹಿರಿಯ ಸಹಕಾರಿಯಾಗಿದ್ದು ಈ ಹಿಂದೆಯೂ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಅನುಭವ ಹೊಂದಿದವರು. ಉದಯ ಎಸ್. ಕೋಟ್ಯಾನ್ ಮೊದಲ ಬಾರಿಗೆ ಉಪಾಧ್ಯಕ್ಷರಾಗಿದ್ದಾರೆ.

ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ತನ್ನ ಬಳಗದ ೧೩ ಮಂದಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಅವಿರೋಧ ಆಯ್ಕೆಗೆ ಕಾರಣರಾದರು. ಆಯ್ಕೆಗೊಂಡಿರುವ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರು ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಮಂಗಳವಾರ ಅಭಿನಂದಿಸಿದರು.

ಹಾಲು ಒಕ್ಕೂಟದ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಸುಧಾಕರ್ ಶೆಟ್ಟಿ, ಎನ್.ಮಂಜಯ್ಯ ಶೆಟ್ಟಿ, ಕೆ. ಶಿವಮೂರ್ತಿ, ಸುಚರಿತ ಶೆಟ್ಟಿ, ನಂದರಾಮ್ ರೈ, ಎಸ್. ಬಿ. ಜಯರಾಮ ರೈ, ಚಂದ್ರಶೇಖರ ರಾವ್, ಎಚ್. ಪ್ರಭಾಕರ್, ಮಮತಾ ಆರ್.ಶೆಟ್ಟಿ , ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೆಶಕರುಗಳಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಮಹೇಶ್ ಹೆಗ್ಡೆ ಎಂ, ಅಶೋಕ್ ಕುಮಾರ್ ಶೆಟ್ಟಿ ಹಾಗೂ ಉದ್ಯಮಿ ಜಯಪ್ರಕಾಶ್ ತುಂಬೆ ಮೊದಲಾದವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News