ಇಸ್ಲಾಮ್ ಧರ್ಮದ ಬಗ್ಗೆ ಅಧ್ಯಯನ ಅಗತ್ಯ: ಡಾ. ಹುಸೈನ್ ಸಖಾಫಿ ಚುಳ್ಳಿಕೋಡು
ಉಳ್ಳಾಲ: ಇಸ್ಲಾಮ್ ಧರ್ಮದ ಬಗ್ಗೆ ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರವಾದಿಯ ವರು ಸಾರಿದ ಹಾದಿಯಲ್ಲಿ ನಮ್ಮ ಬದುಕು ಇರಬೇಕು ಎಂದು ಡಾ.ಹುಸೈನ್ ಸಖಾಫಿ ಚುಳ್ಳಿಕೋಡು ಹೇಳಿದರು.
ಅವರು ಉಳ್ಳಾಲ ದರ್ಗಾ ದ 22 ಪಂಚವಾರ್ಷಿಕ ಉರೂಸ್ ಪ್ರಯುಕ್ತ ಮಂಗಳವಾರ ದರ್ಗಾ ವಠಾರದಲ್ಲಿ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಧಾರ್ಮಿಕ ಕಾರ್ಯಕ್ರಮಗಳು ನಡೆಸುವ ನಾವು ಒಗ್ಗಟ್ಟಿನಲ್ಲಿ ಇದ್ದುಕೊಂಡು ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ.ಎಲ್ಲದಕ್ಕಿಂತ ಮೊದಲು ನಮಗೆ ಬೇಕಾದುದು ಶಿಕ್ಷಣ ಎಂದು ಕರೆ ನೀಡಿದರು.
ಯು.ಕೆ. ಮುಹಮ್ಮದ್ ಸ ಅದಿ ವಳವೂರು ಧಾರ್ಮಿಕ ಪ್ರವಚನ ನೀಡಿದರು. ಸಯ್ಯಿದ್ ಜಲಾಲುದ್ದೀನ್ ತಂಙಳ್ ಅಳೇಕಲ ದುಆ ನೆರವೇರಿಸಿದರು.
ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದರ್ಗಾ ಮಾಜಿ ಅಧ್ಯಕ್ಷ ಕಣಚೂರು ಮೋನು, ಬೊಟ್ಟು ಮಸೀದಿ ಅಧ್ಯಕ್ಷ ಮುಹ್ ಯಿದ್ದೀನ್, ಇಮಾಮ್ ನೌಫಲ್ ಮದನಿ,ದಾರಂದ ಬಾಗಿಲು ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಹಮೀದ್, ಇಮಾಮ್ ಜಾಬಿರ್ ಫಾಳಿಲಿ , ಮಿಲ್ಲತ್ ನಗರ ಮಸೀದಿ ಅಧ್ಯಕ್ಷ ಇಬ್ರಾಹೀಮ್ ಖಲೀಲ್, ಇಮಾಮ್ ಅಬೂಬಕ್ಕರ್ ಸಿದ್ದೀಕ್ ನಿಝಾಮಿ, ಕಣಚೂರು ಮೆಡಿಕಲ್ ಕಾಲೇಜು ನಿರ್ದೇಶಕ ಅಬ್ದುಲ್ ರಹ್ಮಾನ್, ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಕಾರ್ಯದರ್ಶಿ ಮುಸ್ತಫಾ ಮದನಿಗರ, ಕೋಶಾಧಿಕಾರಿ ನಾಝೀಮ್ ಮುಕಚೇರಿ, ಸದಸ್ಯ ಝೈನುದ್ದೀನ್ ಮೇಲಂಗಡಿ, ಝಿಯಾದ್ ತಂಙಳ್, ಇಮ್ತಿಯಾಝ್,ಮೊಯ್ದಿನ್ ಪಟ್ಲ, ಅಬೂಬಕ್ಕರ್ ಹೈದರಲಿ ನಗರ,ಅರೆಬಿಕ್ ಕಾಲೇಜು ಪ್ರೊಫೆಸರ್ ಇಬ್ರಾಹಿಂ ಅಹ್ಸನಿ, ಆಝಾದ್ ಇಸ್ಮಾಯಿಲ್ ,ಕೇಂದ್ರ ಜುಮ್ಮಾ ಮಸೀದಿ ಖತೀಬ್ ಹಾಫಿಳ್ ಅಬ್ದುಲ್ ಮಜೀದ್ ಫಾಳಿಲಿ ಕಾಮಿಲ್ ಸಖಾಫಿ ಮತ್ತಿತರರು ಉಪಸ್ಥಿತರಿದ್ದರು.
ದರ್ಗಾ ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಸ್ವಾಗತಿಸಿದರು.