×
Ad

ಭಯೋತ್ಪಾದಕರ ವಿರುದ್ಧದ ಕ್ರಮಗಳಿಗೆ ಬೆಂಬಲ: ಸಿಪಿಐಎಂ

Update: 2025-05-07 19:11 IST

ಉಡುಪಿ, ಮೇ 7: ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳು ಮತ್ತು ಮೂಲಸೌಕರ್ಯಗಳನ್ನು ನಾಶಮಾಡುವ ಉದ್ದೇಶದಿಂದ ಭಾರತೀಯ ಸಶಸ್ತ್ರ ಪಡೆಗಳು ನಡೆಸಿರುವ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಸಿಪಿಐಎಂ ಬೆಂಬಲ ವ್ಯಕ್ತಪಡಿಸಿದೆ.

ಒಕ್ಕೂಟ ಸರಕಾರ ಕರೆದ ಸರ್ವಪಕ್ಷ ಸಭೆಯಲ್ಲಿ, ಭಯೋತ್ಪಾದಕರು ಮತ್ತು ಅವರ ನಿರ್ವಾಹಕರ ವಿರುದ್ಧ ಗುರಿಯಿಟ್ಟು ಒಕ್ಕೂಟ ಸರಕಾರ ತೆಗೆದುಕೊಳ್ಳುವ ಕ್ರಮಗಳಿಗೆ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡಿ ದ್ದವು ಎಂಬುದನ್ನು ಈ ಸಂದರ್ಭದಲ್ಲಿ ಸಿಪಿಐಎಂ ಪೊಲಿಟ್ ಬ್ಯುರೊ ಹೇಳಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕ್ರಮಗಳ ಜೊತೆಗೆ, ಪಹಲ್ಗಾಮ್‌ನಲ್ಲಿ ಮುಗ್ಧ ಜನರ ಹತ್ಯಾಕಾಂಡಕ್ಕೆ ಕಾರಣರಾದವರನ್ನು ಹಸ್ತಾಂತರಿ ಸಲು ಮತ್ತು ತನ್ನ ಪ್ರದೇಶದಿಂದ ಯಾವುದೇ ಭಯೋತ್ಪಾದಕ ಶಿಬಿರಗಳು ಕಾರ್ಯ ನಿರ್ವಹಿಸದಂತೆ ನೋಡಿಕೊಳ್ಳಲು ಪಾಕಿಸ್ತಾನದ ಮೇಲೆ ಒತ್ತಡ ಹೇರುವುದನ್ನು ಮುಂದುವರಿಸಬೇಕು. ಜನರ ಐಕ್ಯತೆ ಮತ್ತು ದೇಶದ ಸಮಗ್ರತೆಯನ್ನು ರಕ್ಷಿಸಲಾಗುತ್ತಿದೆ ಎಂಬುದನ್ನು ಭಾರತ ಸರಕಾರ ಖಚಿತಗೊಳಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News