ಕದ್ರಿ ದೇವಸ್ಥಾನದಲ್ಲಿ ಭಾರತೀಯ ಸೇನೆಗೆ ವಿಶೇಷ ಪೂಜೆ
ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ನಾಳೆ ಬೆಳಿಗ್ಗೆ 10ಕ್ಕೆ ಪೂಜೆ ನಡೆಯಲಿದೆ.
ಸಚಿವ ರಾಮಲಿಂಗಾರೆಡ್ಡಿ ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆಗಳನ್ನು ಸಲ್ಲಿಸಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತಾ, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಪೂಜೆಗಳನ್ನು ನೆರವೇರಿಸಲು ನೀಡಿದ ನಿರ್ದೇಶನದ ಪ್ರಕಾರ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ನಾಳೆ ಬೆಳಿಗ್ಗೆ 10ಕ್ಕೆ ಸಾಮೂಹಿಕ ಪ್ರಾರ್ಥನೆ ಹಾಗೂ ವಿಶೇಷ ಸಂಕಲ್ಪದೊಂದಿಗೆ ಪೂಜೆ ಸಲ್ಲಿಸಲು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ನಿರ್ಧರಿಸಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.