ಮಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಸಿಹಿ ಹಂಚುವ ಮೂಲಕ ವಿಜಯೋತ್ಸವ
ಮಂಗಳೂರು: ಆಪರೇಶನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು ಸಂಜೆ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದೆ.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಮುಂದೆ ಸಿಹಿ ಹಂಚಿ ಸಂಭ್ರವಿಸಿದ ಕಾಂಗ್ರೆಸ್ ಧುರೀಣರು, ಭಾರತದ ಸೇನೆಯ ಕಾರ್ಯಾಚರಣೆಯನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಅವರು ಭಾರತದ ಸೇನೆ ಪಾಕಿಸ್ತಾನದಲ್ಲಿರುವ ಉಗ್ರ ನೆಲೆಗಳ ಮೇಲೆ ದಾಳಿ ಮಾಡಿ, ಉಗ್ರರನ್ನು ಧ್ವಂಸ ಮಾಡುವ ಮೂಲಕ ದೇಶದ ಎಲ್ಲರೂ ಹೆಮ್ಮೆ ಪಡುವಂತೆ ಮಾಡಿದೆ. 35ಕ್ಕೂ ಪಾಕಿಸ್ತಾನ ಬೆಂಬಲಿತ ಉಗ್ರರನ್ನು ಸದೆಬಡಿಯುವ ಮೂಲಕ ಉಗ್ರರಿಗೆ ನೆರವು ನೀಡುವ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ. ಈ ಕಾರ್ಯಾಚರಣೆಗೆ ಸಿಂಧೂರ ಎಂದು ಹೆಸರಿಟ್ಟಿರುವುದು ಅರ್ಥಪೂರ್ಣ ಎಂದರು.
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಎನ್‌ಎಸ್‌ಯುಐ ದ.ಕ. ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ, ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಬಶೀರ್ ಕಣ್ಣೂರು, ಮಾಜಿ ಮೇಯರ್ ಅಶ್ರಫ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ರೂಪಾ ಚೇತನ್ , ಕಾಂಗ್ರೆಸ್ ಧುರೀಣರಾದ ಸುನೀಲ್ ಬಜಿಲಕೇರಿ, ಸುಹೈಲ್ ಕಂದಕ್ , ಚೇತನ್ ಕುಮಾರ್ ಉರ್ವ, ನೀರಜ್‌ಚಂದ್ರಪಾಲ್, ನಿತ್ಯಾನಂದ ಶೆಟ್ಟಿ , ಫಾರೂಕ್ ಬಾಯಬೆೆ , ನಝೀರ್ ಬಜಾಲ್ ಮತ್ತಿತರರು ಭಾಗವಹಿಸಿದ್ದರು.