×
Ad

ಅಲ್ಪಸಂಖ್ಯಾತರ ಶಾಲಾ ಕಾಲೇಜಿಗೆ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

Update: 2025-05-08 19:10 IST

ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಮಾದರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜು, ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಕಾಲೇಜು ಮತ್ತು ಸರಕಾರಿ ಮುಸ್ಲಿಂ ವಸತಿ ಶಾಲೆಗಳಲ್ಲಿ ಬೋಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕುದ್ರೋಳಿ, ಉಳಾಯಿಬೆಟ್ಟು, ಗುರುಕಂಬಳ, ಬೋಳಿಯಾರ್, ಮಂಜನಾಡಿ, ಮಲ್ಲೂರು, ಕಿನ್ಯ, ಮೂಲರಪಟ್ನ, ಪುದು ಫರಂಗಿಪೇಟೆ, ಪುತ್ತೂರು, ಕಡಬದ ಮೌಲಾನಾ ಆಜಾದ್ ಹಿರಿಯ ಪ್ರಾಥಮಿಕ ಶಾಲೆಗೆ ಕನ್ನಡ, ಇಂಗ್ಲಿಷ್, ಹಿಂದಿ, ಸಮಾಜ ವಿಜ್ಞಾನ, ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪುದು ಫರಂಗಿಪೇಟೆ ಮತ್ತು ಮಂಜನಾಡಿಯ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜಿಗೆ ಕನ್ನಡ, ಇಂಗ್ಲಿಷ್, ಭೌತಶಾಸ್ತ್ರ, ರಾಸಾಯನ ಶಾಸ್ತ್ರ, ಗಣಿತ, ಜೀವಶಾಸ್ತ್ರ ವಿಷಯ ಬೋಧಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಬಾಲಕಿಯರ ವಸತಿ ಶಾಲೆಗೆ ಸಮಾಜ ವಿಜ್ಞಾನ ಗಣಿತ, ವಿಜ್ಞಾನ ವಿಷಯ ಬೋಧಿಸಲು ಹಾಗೂ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜಿಗೆ ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ, ಇತಿಹಾಸ, ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಬೋಧಿಸಲು ಹಾಗೂ ಸರಕಾರಿ ಮುಸ್ಲಿಂ ವಸತಿ ಶಾಲೆಗೆ ಕಂಪ್ಯೂಟರ್ ಶಿಕ್ಷಣ ಮತ್ತು ದೈಹಿಕ ಶಿಕ್ಷಕರ ಹುದ್ದೆಗೆ ಮೇ 19ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಪಾಂಡೇಶ್ವರದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿ ಅಥವಾ ಇಲಾಖಾ ವೆಬ್‌ಸೈಟ್ https://dom.karnataka.gov.in/dakshina_kannada/publicನಿಂದ ಪಡೆದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಗೆ ಸಲ್ಲಿಸಬೇಕು. ಹುದ್ದೆಗಳ ವಿದ್ಯಾರ್ಹತೆಯನ್ನು ವೆಬ್‌ಸೈಟ್ ಮೂಲಕ ಪರಿಶೀಲಿಸಬಹುದು. ಹೆಚ್ಚಿನ ಮಾಹಿತಿಗೆ ಪಾಂಡೇಶ್ವರದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿ ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News