×
Ad

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕಾರ್ಯಾಗಾರ

Update: 2025-05-08 19:16 IST

ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳಿಗೆ ಗುರುವಾರ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಶಾಕಿರಣ ಕಾನ್ಫರೆನ್ಸ್ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಹಾಗೂ ಅವರ ಅವಲಂಬಿತರಿಗೆ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮಾಹಿತಿ ಹಾಗೂ ನೋಂದಣಿ ಪ್ರಕ್ರಿಯೆಯ ಕಾರ್ಯಾಗಾರ ನಡೆಯಿತು.

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ಉದಯಕುಮಾರ್ ಕಾರ್ಯಗಾರ ಉದ್ಘಾಟಿಸಿದರು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಉಪನಿರ್ದೇಶಕ ಡಾ. ಮಹೇಶ್ ಹಾಗೂ ಡಾ. ಧನಂಜಯ್ ಮಾಹಿತಿ ನೀಡಿದರು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಡಾ. ಸುದರ್ಶನ್ ಸಿ.ಎಂ ಉಪಸ್ಥಿತರಿದ್ದರು.

ಜಿಲ್ಲಾ ಸಂಯೋಜಕಿ ಡಾ. ನೌಷಾದ್ ಭಾನು ಸ್ವಾಗತಿಸಿದರು. ಆರೋಗ್ಯ ಮಿತ್ರ ಜಗನ್ನಾಥ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News