ಶಾಸಕ ಭರತ್ ಶೆಟ್ಟಿ ವಿರುದ್ಧ ಅಪಪ್ರಚಾರ ಆರೋಪ: ಪ್ರಕರಣ ದಾಖಲು
Update: 2025-05-08 21:34 IST
ಭರತ್ ಶೆಟ್ಟಿ
ಮಂಗಳೂರು : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಿದ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 6ರಂದು ಸುನೀಲ್ ಸಾಲ್ಯಾನ್ ಎಂಬಾತ ಶಾಸಕರ ವಿರುದ್ಧ ಸುಳ್ಳು ಸುದ್ದಿಯೊಂದನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಎಂದು ದೂರಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ಮತ್ತು ಗುಂಪು ಹತ್ಯೆಗಳು ಭರತ್ ಶೆಟ್ಟಿ ಕ್ಷೇತ್ರದಲ್ಲಿ ನಡೆದಿದ್ದು, ಗುಂಪು ಹತ್ಯೆಯನ್ನು ಮರೆಮಾಚಿ ಬಿಜೆಪಿ ಪಕ್ಷಕ್ಕೆ ಮೈಲೇಜ್ ನೀಡುವ ಸಲುವಾಗಿ ಸುಹಾಸ್ ಹತ್ಯೆ ಮಾಡಲಾಗಿದೆಯೇ..? ಎಂಬ ರೀತಿಯಲ್ಲಿ ಬಿಂಬಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.