×
Ad

ಸೇನಾ ಕಾರ್ಯಾಚರಣೆ: ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ

Update: 2025-05-09 18:54 IST

ಮಂಗಳೂರು: ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಮಸೀದಿಗಳಲ್ಲಿ ಶುಕ್ರವಾರ ಮಧ್ಯಾಹ್ನ ವಿಶೇಷ ಪ್ರಾರ್ಥನೆ ಮಾಡಲಾಯಿತು.

ಪ್ರಾರ್ಥನೆಯ ಬಳಿಕ ಮಸೀದಿಯ ಇಮಾಮರು ಪ್ರವಚನ ನೀಡಿದರು.

ರಾಜ್ಯ ವಕ್ಫ್ ಸಮಿತಿಯು ರಾಜ್ಯದ ಎಲ್ಲ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಸೂಚನೆ ನೀಡಿತ್ತು.

ಮಸೀದಿಯ ಇಮಾಮ್ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆಯನ್ನು ಅಭಿನಂದಿಸಿದರು.

ಮಂಗಳೂರು ಬಾವುಟ ಗುಡ್ಡೆಯ ಜುಮಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಭಾರತದ ಸೇನೆಗೆ ಬೆಂಬಲ ಮತ್ತು ಧೈರ್ಯ ತುಂಬ ಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಇದಕ್ಕಾಗಿ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದಾದ್ಯಂತ ಎಲ್ಲಡೆ ಇರುವ ಮಸೀದಿಗಳಲ್ಲಿ ದೇಶದ ನಮ್ಮ ಹೆಮ್ಮೆಯ ಯೋಧರಿಗಾಗಿ ವಿಶೇಷ ಪ್ರಾರ್ಥನೆ ಮಾಡಲಾಯಿತು ಎಂದು ನುಡಿದರು.

ಉಗ್ರನೆಲೆಗಳನ್ನು ಧ್ವಂಸ ಮಾಡುವ ಮೂಲಕ ಪಹಲ್ಗಾಮ್ ಹತ್ಯಾಕಾಂಡಕ್ಕೆ ಭಾರತ ಪ್ರತೀಕಾರ ತೀರಿಸಿ ಕೊಂಡಿದ್ದು, ಭಾರತದ ನೆಮ್ಮದಿಗೆ ಭಂಗ ತರಲು ಯತ್ನಿಸುತ್ತಿರುವ ಪಾಕಿಸ್ತಾನಕ್ಕೆ ತಕ್ಕ ಬುದ್ದಿ ಕಲಿಸಿದೆ. ಭಾರತೀಯರ ಮೇಲೆ ಯಾವುದೇ ದಾಳಿ ನಡೆದರೂ ಅದನ್ನು ಹಿಮ್ಮೆಟ್ಟಿಸಲು ದೇಶ ಸನ್ನದ್ಧವಾಗಿದೆ ಎಂಬ ಸಂದೇಶವನ್ನು ನಮ್ಮ ದೇಶದ ಸೇನೆಯು ಕಾರ್ಯಾಚರಣೆ ಮೂಲಕ ತೋರಿಸಿಕೊಟ್ಟಿದೆ ಎಂದು ಹೇಳಿದರು.

ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಬಿಕರ್ನಕಟ್ಟೆಯ ಅಹಸನುಲ್ ಜುಮಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News