×
Ad

ಪ್ರಚೋದನಕಾರಿ ಸಂದೇಶ ಫಾರ್ವರ್ಡ್ ಮಾಡಿದ ಆರೋಪ:‌ ಓರ್ವ ವಶಕ್ಕೆ

Update: 2025-05-10 22:22 IST

ಮಂಗಳೂರು:‌ ರೌಡಿಶೀಟರ್ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮುಸ್ಲಿಮ್ ಯುವಸೇನೆ ಎಂಬ ವಾಟ್ಸಪ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶವನ್ನು ಫಾರ್ವಡ್ ಮಾಡಿದ್ದ ಆರೋಪದಲ್ಲಿ ವಿಟ್ಲದ ಅನಾಸ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅನಾಸ್ ವಿರುದ್ಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈ ಪ್ರಕರಣವನ್ನು ಮುಂದಿನ ತನಿಖೆಗಾಗಿ ಮಂಗಳೂರು ನಗರ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News