×
Ad

ಹೊಸ ಪೋಪ್ ಆಗಿ ಆಯ್ಕೆ: ಹರ್ಷ ವ್ಯಕ್ತಪಡಿಸಿದ ಮಂಗಳೂರು ಬಿಷಪ್

Update: 2025-05-10 22:27 IST

ಪೀಟರ್ ಪಾವ್ಲ್ ಸಲ್ಡಾನ್ಹಾ

ಮಂಗಳೂರು: ಪೋಪ್ ಫ್ರಾನ್ಸಿಸ್ ಅವರ ಉತ್ತರಾಧಿಕಾರಿಯಾಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೊಸ್ಟ್ ಅವರು ಹೊಸ ಪೋಪ್ ಆಗಿ ಆಯ್ಕೆಗೊಂಡಿದ್ದು, ಈ ಬಗ್ಗೆ ಕ್ಯಾಥೊಲಿಕ್ ಧರ್ಮ ಸಭೆ ಸಂತೋಷ ಪಡುತ್ತದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪೀಟರ್ ಪಾವ್ಲ್ ಸಲ್ಡಾನ್ಹಾ ಅಭಿಪ್ರಾಯಪಟ್ಟಿದ್ದಾರೆ.

ಪೋಪ್ ರಾಬರ್ಟ್ ಫ್ರಾನ್ಸಿಸ್ ಪ್ರೆವೊಸ್ಟ್ ಅವರು ಪೋಪ್ ಲಿಯೋ ಗಿಐ್ಖ ಎಂಬ ಹೆಸರನ್ನು ಪಡೆದುಕೊಂಡಿ ದ್ದಾರೆ. ಇದು ಜಾಗತಿಕ ಕ್ಯಾಥೊಲಿಕ್ ಧರ್ಮ ಸಭೆಗೆ ಅತೀವ ಸಂತೋಷ ಮತ್ತು ನವೀಕೃತ ಭರವಸೆಯ ಕ್ಷಣವಾಗಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಎಂದು ಪೀಟರ್ ಪಾವ್ಲ್ ಸಲ್ಡಾನ್ಹಾ ಹೇಳಿದ್ದಾರೆ.

*ಭಯೋತ್ಪಾದಕರ ದಾಳಿಯಿಂದ ಮೃತಪಟ್ಟವರಿಗೆ ಪ್ರಾರ್ಥನೆ: ಇದೇ ವೇಳೆ ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ತಮ್ಮವರನ್ನು ಕಳೆದುಕೊಂಡು ಸಂತ್ರಸ್ತರಾದವರಿಗೆ ಪರ ನಾವು ನಿಲ್ಲಬೇಕು.

ದಾಳಿಯಲ್ಲಿ ಸಾವನ್ನಪ್ಪಿದವರಿಗೆ ಆತ್ಮಶಾಂತಿ ಮತ್ತು ಗಾಯಗೊಂಡವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದು ಬಿಷಪ್ ತಿಳಿಸಿದ್ದಾರೆ.

ಇದೇ ಸಮಯದಲ್ಲಿ ನಮ್ಮ ದೇಶದ ಗಡಿಗಳನ್ನು ಕಾಯುತ್ತಾ ನಮ್ಮ ಜನರನ್ನು ರಕ್ಷಣೆ ಮಾಡುತ್ತಿರುವ ನಮ್ಮ ಸಶಸ್ತ್ರ ಪಡೆಗಳ ಧೈರ್ಯ ಮತ್ತು ದಿಟ್ಟತನದ ಪ್ರಯತ್ನಗಳಿಗೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ. ನಾವು ನೆರೆಯ ರಾಷ್ಟ್ರಗಳ ನಡುವೆ ಶಾಂತಿಗಾಗಿ ಪ್ರಾರ್ಥಿಸಬೇಕು. ಈ ಉದ್ದೇಶಗಳಿಗಾಗಿ ಮಂಗಳೂರು ಧರ್ಮ ಪ್ರಾಂತ್ಯದ ಎಲ್ಲಾ ಚರ್ಚ್‌ಗಳ ಧರ್ಮಗುರುಗಳು ಮತ್ತು ಚಾಪ್ಲಿನ್‌ಗಳು 2025 ಮೇ 11ರಂದು ರವಿವಾರ ಬಲಿ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆಗೆ ಬಿಷಪ್ ಕರೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News