ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವೈ ಸುಕುಮಾರ್ ಆಯ್ಕೆ
Update: 2025-05-11 20:13 IST
ಕಾಪು : ಕಾಪು ವಿಧಾನಸಭಾ ಕ್ಷೇತ್ರದ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವೈ. ಸುಕುಮಾರ್ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಸುಕುಮಾರ್, ಪಡುಬಿದ್ರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಜೆಸಿಐ ಪಡುಬಿದ್ರಿಯ ಅಧ್ಯಕ್ಷರಾಗಿ ರಾಷ್ಟ್ರೀಯು ಜೆಸಿಐಯ ನಿರ್ದೇಶಕರಾಗಿ ಶೈಕ್ಷಣಿಕ ಹಾಗೂ ಸಾಮಾಜಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ಮೇ 12ರ ಪೂರ್ವಾಹ್ನ 10ಕ್ಕೆ ಕಾಪು - ರಾಜೀವ್ ಭವನದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.