×
Ad

ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಅಸ್ಮಿತಾ’ ಕಾರ್ಯಕ್ರಮ

Update: 2025-05-12 19:17 IST

ಮಂಗಳೂರು: ವಿಶ್ವ ತಾಯಂದಿರ ದಿನದ ಅಂಗವಾಗಿ ಹೊಸದಿಲ್ಲಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ವಿಶ್ವ ಕೊಂಕಣಿ ಕೇಂದ್ರದ ಸಹಯೋಗದೊಂದಿಗೆ ‘ಅಸ್ಮಿತಾ’ ವಿಶೇಷ ಕಾರ್ಯಕ್ರಮ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆಯಿತು.

ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ ವಿಜೇತೆ ವಿಲ್ಮಾ ಬಂಟ್ವಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಡಯನಾ ಶರಲ್ ಲೋಬೊ, ಮೇರಿ ಸಲೊಮಿ ಡಿ ಸೋಜ ಕವಿತೆ, ಫೆಲ್ಸಿ ಲೋಬೊ ಪ್ರಬಂಧ ಮತ್ತು ಸ್ಮಿತ ಪ್ರಜ್ಞ ಸಣ್ಣ ಕತೆ ಪ್ರಸ್ತುತ ಪಡಿಸಿದರು. ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ಸಲಹಾ ಸಮಿತಿ ಸಂಚಾಲಕ ಮೆಲ್ವಿನ್ ರೊಡ್ರಿಗಸ್ ಸಾಹಿತ್ಯ ಅಕಾಡೆಮಿಯ ಚಟುವಟಿಕೆಗಳು ಮತ್ತು ಅಸ್ಮಿತಾ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಶ್ವ ಕೊಂಕಣಿ ಕೇಂದ್ರದ ಆಡಳಿತಾಧಿಕಾರಿ ಡಾ ಬಿ. ದೇವದಾಸ ಪೈ ಸ್ವಾಗತಿಸಿದರು.ಸಾಹಿತ್ಯ ಅಕಾಡೆಮಿ ಕೊಂಕಣಿ ಸಲಹಾ ಸಮಿತಿ ಸದಸ್ಯ ಎಚ್. ಎಂ. ಪೆರ್ನಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಮಂಗಳೂರು, ಉಡುಪಿ, ಕೇರಳದಿಂದ ಸಾಹಿತಿಗಳು ಮತ್ತು ಸಾಹಿತ್ಯಾಸಕ್ತರು ಭಾಗವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News