×
Ad

ಅಡ್ಡೂರು: ಸೆಂಟ್ರಲ್ ಕಮಿಟಿ ವತಿಯಿಂದ ವೃತ್ತಿ ಮಾರ್ಗದರ್ಶನ, ಕೌನ್ಸಿಲಿಂಗ್ ಕಾರ್ಯಾಗಾರ

Update: 2025-05-12 21:55 IST

ಅಡ್ಡೂರು : ಸೆಂಟ್ರಲ್ ಕಮಿಟಿ ವತಿಯಿಂದ ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗ ದರ್ಶನ ಮತ್ತು ಕೌನ್ಸಿಲಿಂಗ್ ಕಾರ್ಯಾಗಾರ ಇತ್ತೀಚೆಗೆ ಅಡ್ಡೂರು ಕಮ್ಯೂನಿಟಿ ಸೆಂಟರ್ ನಲ್ಲಿ ನಡೆಯಿತು‌.

ಸ್ಪರ್ಧಾತ್ಮಕ ಪರೀಕ್ಷೆ ಮಾಹಿತಿ, ವಿದ್ಯಾರ್ಥಿ ವೇತನ ಮಾಹಿತಿ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳು ಆರ್ಥಿಕ ಹಿಂದುಳಿದಿದ್ದರೆ ಅಂತವರಿಗೆ ಉಚಿತ ವೃತ್ತಿಪರ ಕೋರ್ಸ್ ದಾಖಲಾತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗೆ ನೆರವು ನೀಡುವುದಾಗಿ ಅಡ್ಡೂರು ಕಮ್ಯೂನಿಟಿ ಸೆಂಟರ್ ಭರವಸೆ ನೀಡಿತು.

ಅಡ್ಡೂರು ಕಮ್ಯೂನಿಟಿ ಸೆಂಟರ್ ಸಾಧಕರನ್ನು ಗುರುತಿಸಿ ಅವರನ್ನು ಸನ್ಮಾನಿಸಿ ಸ್ಫೂರ್ತಿ ತುಂಬುವ ಕೆಲಸ ಮಾಡುತ್ತಿತ್ತು. ಆದರೆ ಸಂಸ್ಥೆ ಇನ್ನಷ್ಟು ಪರಿಣಾಮಕಾರಿ ಕಾರ್ಯಾಚರಿಸುವ ನಿಟ್ಟಿನಲ್ಲಿ ಸಾಧಕರೊಂದಿಗೆ ಸಮಾಲೋಚನೆ ನಡೆಸಿ, ಅವರ ಅನುಭವಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಲಾಯಿತು.

ಇದೇ ಸಂದರ್ಭ ಪುತ್ತೂರು ಕಮ್ಯೂನಿಟಿ ಸೆಂಟರ್ ನ ಕೌನ್ಸಿಲ್ ಸದಸ್ಯರು, ವಿವಿಧ ವೃತ್ತಿಪರ ಕ್ಷೇತ್ರದಲ್ಲಿ ಸಾಧನೆ ಮಾಡಲು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಬೇಕಾಗಿರುವ ಉಪಯುಕ್ತ ಮಾಹಿತಿಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಈ ಸಂದರ್ಭ ಅಡ್ಡೂರು ಸೆಂಟ್ರಲ್ ಕಮಿಟಿ ಅಧ್ಯಕ್ಷರಾದ ಎಂ.ಎಸ್.ರಫೀಕ್, ಉಪಾಧ್ಯಕ್ಷರಾದ ಅಬ್ದುಲ್ ರಝಾಕ್, ಹಾಗೂ ಮುಹಮ್ಮದ್ ಇಬ್ರಾಹಿಂ ಅಲಕೆ, ಅಬ್ದುಲ್ ಕಾದರ್, ಪುತ್ತೂರು ಕಮ್ಯೂನಿಟಿ ಸೆಂಟರ್ ನ ಹನೀಫ್ ಪುತ್ತೂರು, ಇಮ್ತಿಯಾಝ್, ಮಸೂದ್ ಮತ್ತಿತರರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News