×
Ad

ವಿಶೇಷ ಚೇತನರ ಪಾಲಿಟೆಕ್ನಿಕ್ : ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2025-05-13 19:40 IST

ಮಂಗಳೂರು, ಮೇ 13: ಮೈಸೂರು ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‌ನಲ್ಲಿ 2025-26ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷ ಚೇತನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

*ಅನುದಾನಿತ ಕೋರ್ಸ್‌ಗಳು:- ಆರ್ಕಿಟೆಕ್ಚರ್ ಅಸಿಸ್ಟೆಂಟ್‌ಶಿಪ್, ಕಮರ್ಷಿಯಲ್ ಪ್ರಾಕ್ಟಿಸ್ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್.

*ಅನುದಾನರಹಿತ ಕೋರ್ಸ್‌ಗಳು:-ಜ್ಯುವೆಲರಿ ಡಿಸೈನ್ ಮತ್ತು ಟೆಕ್ನಾಲಜಿ, ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ಜ್ಯುವಲಿ ಇಂಪೇರ್ಡ್‌), ಅಪಾರೇಲ್ ಡಿಸೈನ್ ಫ್ಯಾಬ್ರಿಕೇಷನ್ ಟೆಕ್ನಾಲಜಿ, ಇಲೆಕ್ಟಿಕಲ್ ಇಂಜಿನಿಯರಿಂಗ್ ಇಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ.

*ಪ್ರವೇಶಾರ್ಹತೆ: ಕರ್ನಾಟಕ ಎಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹಾಗೂ ಮೂಳೆ ಮತ್ತು ಕೀಲು ಅಂಗವಿಕಲತೆ - ಶೇ.40 ಮತ್ತು ಮೇಲ್ಪಟ್ಟು, ಕಿವುಡು, ಮೂಗು ಅಂಗವಿಕಲತೆ - 60 ಡಿಬಿ ಮತ್ತು ಮೇಲ್ಪಟ್ಟು ಹಾಗೂ ಅಂಧತ್ವ - 6/60 ಅಥವಾ 20/200 ಸೈಲೆನ್ ಅಂಗವೈಕಲ್ಯತೆಯ ಲಕ್ಷಣ ಗಳನ್ನು ಹೊಂದಿದವರು ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ಜ್ಯುವಲಿ ಇಂಪೇರ್ಡ್‌) ಕೋರ್ಸ್‌ಗೆ ಅರ್ಜಿ ಸಲ್ಲಿಸಬಹುದು.

ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯು ತ್ತದೆ. ಪಾಲಿಟೆಕ್ನಿಕ್‌ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶ ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿರುತ್ತದೆ. ಪ್ರವೇಶಕ್ಕೆ ಅರ್ಜಿಗಳನ್ನು (ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ., ಹಾಗೂ ಎಸ್‌ಸಿ/ಎಸ್‌ಟಿ/ಸಿ-1 ವರ್ಗದವರಿಗೆ 50 ರೂ.) ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಮೇ 16 ರೊಳಗೆ ಜೆ.ಎಸ್.ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಕಚೇರಿಗೆ ತಲುಪಿಸಬೇಕು.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ www.jsspda.org (ದೂ.ಸಂ:-9844644937) ಸಂಪರ್ಕಿಸಬಹುದು ಅಥವಾ ಮೈಸೂರು ಜೆ.ಎಸ್.ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಪ್ರಾಂಶುಪಾಲರನ್ನು (ದೂ.ಸಂ:- 08212548315, 2548316 ) ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News