×
Ad

ಆಧುನಿಕ ಯುಗ ಶಿಕ್ಷಣದಲ್ಲಿ ಕ್ರಾಂತಿಯನ್ನೇ ಸೃಷ್ಟಿಸಿದೆ: ಅಬ್ದುಲ್ ಹಕೀಮ್ ಅಝ್‌ಅರಿ

Update: 2025-05-13 23:14 IST

ಉಳ್ಳಾಲ: ಪುರಾತನ ಕಾಲದಲ್ಲಿ ಬಹಳ ಕಷ್ಟಪಟ್ಟು ಧರ್ಮ ಗ್ರಂಥಗಳನ್ನು ಅಧ್ಯಯನ ಮಾಡುತ್ತಿದ್ದರು. ಆದರೆ ಆಧುನಿಕ ಯುಗ ಶಿಕ್ಷಣದಲ್ಲಿ ಕ್ರಾಂತಿಯನ್ನೇ ಸೃಷ್ಟಿಸಿದೆ ಎಂದು ಅಬ್ದುಲ್ ಹಕೀಮ್ ಅಝ್ ಅರಿ ಹೇಳಿದರು.

ಅವರು ಉಳ್ಳಾಲ ದರ್ಗಾ ದ 22 ಪಂಚವಾರ್ಷಿಕ ಉರೂಸ್ ಪ್ರಯುಕ್ತ ಮಂಗಳವಾರ ದರ್ಗಾ ವಠಾರದಲ್ಲಿ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈಗಿನ ಕಾಲದಲ್ಲಿ ಶಿಕ್ಷಣ ಕೇಂದ್ರ ಬಹಳಷ್ಟು ಬೆಳೆದಿವೆ.ಆದರೆ ಅದೇ ರೀತಿ ಬದಲಾವಣೆ ನಾವು ಸಮಾಜ ದಲ್ಲಿ ಕಾಣಬೇಕು ಎಂದು ಕರೆ ನೀಡಿದರು.

ಸಯ್ಯಿದ್ ಅಬ್ದುಲ್ ರಹ್ಮಾನ್ ಸಾದಾತ್ ತಂಙಳ್ ಗುರುವಾಯನಕೆರೆ ಧಾರ್ಮಿಕ ಪ್ರವಚನ ನೀಡಿದರು.

ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಗಲ್ಫ್ ಮೀಟ್ : ಉಳ್ಳಾಲ ಉರೂಸ್ ಪ್ರಯುಕ್ತ ಗಲ್ಫ್ ಮೀಟ್ ಕಾರ್ಯಕ್ರಮ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಹಕೀಂ ಅಝ್ಹರಿ ಕಾಂತಪುರಂ ಮುಖ್ಯ ಭಾಷಣ ಮಾಡಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಖಿಳ್ ರಿಯಾನಗರ ಮಸೀದಿ ಅಧ್ಯಕ್ಷ ಹಸನಬ್ಬ, ಖತೀಬ್ ನಿಸಾರ್ ಸಖಾಫಿ, ಇಬ್ರಾಹಿಂ ಮದನಿ,ದರ್ಗಾ ಮಾಜಿ ಅಧ್ಯಕ್ಷ ಯು.ಎಸ್.ಹಂಝ, ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಕಾರ್ಯದರ್ಶಿ ಮುಸ್ತಫಾ ಮದನಿನಗರ, ಇಸ್ಹಾಕ್, ಕೋಶಾಧಿಕಾರಿ ನಾಝೀಮ್ ಮುಕಚೇರಿ, ಸದಸ್ಯ ಅಬ್ದುಲ್ ಖಾದರ್ ಕೋಡಿ, ಇಮ್ತಿಯಾಝ್, ಅಬೂಬಕ್ಕರ್ ಹೈದರಲಿ ನಗರ,ಅರೆಬಿಕ್ ಕಾಲೇಜು ಪ್ರೊಫೆಸರ್ ಇಬ್ರಾಹಿಂ ಅಹ್ಸನಿ, ಉಪಾಧ್ಯಕ್ಷ ಅಶ್ರಫ್ ಹಾಜಿ,ತಂಝೀಲ್ ಯು.ಟಿ., ಕೋಡಿ, ಆಝಾದ್ ಇಸ್ಮಾಯಿಲ್ , ಕೇಂದ್ರ ಜುಮ್ಮಾ ಮಸೀದಿ ಖತೀಬ್ ಹಾಫಿಳ್ ಅಬ್ದುಲ್ ಮಜೀದ್ ಫಾಳಿಲಿ ಕಾಮಿಲ್ ಸಖಾಫಿ , ಉಸ್ಮಾನ್ ಮುಸ್ಲಿಯಾರ್ ,ಫಾರೂಕ್ ಅಬ್ಬಾಸ್ ಕೋಟೆಪುರ ,ಅಬ್ದುಲ್ ಖಾದರ್ ಸಾದಾತ್ ,ಇಬ್ರಾಹಿಂ ಉಳ್ಳಾಲ, ನುಹ್ಮಾನ್ ನೂರಾನಿಮತ್ತಿತರರು ಉಪಸ್ಥಿತರಿದ್ದರು.

ದರ್ಗಾ ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಸ್ವಾಗತಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News