×
Ad

ಪ್ರಧಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪುತ್ತೂರು ಪುಡಾ ಅಧ್ಯಕ್ಷ ವಿರುದ್ಧ ದೂರು

Update: 2025-05-14 19:00 IST

ಪುತ್ತೂರು: ದೇಶದ ಪ್ರಧಾನಿ ವಿರುದ್ಧ ಫೇಸ್ ಬುಕ್ ಪೇಜ್‌ನಲ್ಲಿ ಪುತ್ತೂರು ನಗರ ಯೋಜನಾ ಪ್ರಾಧಿಕಾರ (ಪುಡಾ)ದ ಅಧ್ಯಕ್ಷ ಅಮಳ ರಾಮಚಂದ್ರ ಅವರು ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ಬಿಜೆಪಿಯಿಂದ ನಗರ ಠಾಣೆಯ ಪೊಲೀಸರಿಗೆ ಬುಧವಾರ ದೂರು ನೀಡಲಾಗಿದೆ.

ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜ ಅವರಿಗೆ ದೂರು ನೀಡಿದ್ದಾರೆ.

ದೇಶದ ಪ್ರಧಾನಿಯನ್ನು ಅವಮಾನ ಮಾಡಿದ ಅಮಳ ರಾಮಚಂದ್ರ ಅವರ ಬಗ್ಗೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ದೂರಿನಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರು, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಮಾಜಿ ಪುರಸಭಾ ಅಧ್ಯಕ್ಷ ರಾಜೇಶ್ ಬನ್ನೂರು ಸಹಿತ ಬಿಜೆಪಿ ಮಂಡಲದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News