×
Ad

ಮಂಗಳೂರು: ವಿಶ್ವ ಡೆಂಗ್ಯೂ ದಿನದ ಪ್ರಯುಕ್ತ ಜಾಥಾ

Update: 2025-05-17 20:23 IST

ಮಂಗಳೂರು, ಮೇ 17: ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ದ.ಕ, ತಾಲೂಕು ಆರೋಗ್ಯಾಧಿ ಕಾರಿ ಕಚೇರಿಯ ಸಹಯೋಗದೊಂದಿಗೆ ವಿಶ್ವ ಡೆಂಗ್ ದಿನದ ಪ್ರಯುಕ್ತ ಶನಿವಾರ ನಗರದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಹಾಗೂ ಜಿಲ್ಲಾ ವೆನ್ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಜಾಥಾಕ್ಕೆ ಹಸಿರು ನಿಶಾನೆ ನೀಡಿದರು.

ಬಾವುಟಗುಡ್ಡದಿಂದ ಆರಂಭಗೊಂಡ ಜಾಥಾವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯವರೆಗೆ ಸಾಗಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿ ಕಾರಿ ಡಾ.ಜೆಸಿಂತಾ ಡಿಸೋಜ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನವೀನ್‌ಚಂದ್ರ ಕುಲಾಲ್, ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಕುಮಾರ್, ಡಾ.ಅಣ್ಣಯ್ಯ ಕುಲಾಲ್ ಮತ್ತಿತರರು ಭಾಗವಹಿಸಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News