×
Ad

ಉಳ್ಳಾಲ ಉರೂಸ್: ಅನ್ನದಾನಕ್ಕೆ ಚಾಲನೆ

Update: 2025-05-17 22:37 IST

ಉಳ್ಳಾಲ: ಉರೂಸ್ ಪ್ರಯುಕ್ತ ಭಕ್ತಾದಿಗಳಿಗೆ ಅನ್ನದಾನ ಒದಗಿಸುವ ಕಾರ್ಯಕ್ರಮಕ್ಕೆ ಶನಿವಾರ ರಾತ್ರಿ ಚಾಲನೆ ನೀಡಲಾಯಿತು.

ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಚಾಲನೆ ನೀಡಿದರು. ಈ ವೇಳೆ ಸಹಸ್ರಾರು ಸಂಖ್ಯೆಯಲ್ಲಿ ಮಹಿಳೆಯರು, ಪುರುಷರು ಶನಿವಾರ ರಾತ್ರಿ ಪಾಲ್ಗೊಂಡರು. ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ದರ್ಗಾ ಸಮಿತಿ ಭದ್ರತೆ ಏರ್ಪಡಿಸಿತ್ತು. ಪೊಲೀಸ್ ಬಂದೋಬಸ್ತ್ ಕೂಡ ಏರ್ಪಡಿಸಲಾಗಿದೆ. ಶನಿವಾರ ರಾತ್ರಿ ಆರಂಭಗೊಂಡ ಈ ಅನ್ನದಾನ ರವಿವಾರ ಸಂಜೆಯವರೆಗೆ ನಡೆಯಲಿದೆ ಎಂದು ದರ್ಗಾ ಅಧ್ಯಕ್ಷ ಹನೀಫ್ ಹಾಜಿ ತಿಳಿಸಿದ್ದಾರೆ.

ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಕೋಶಾಧಿಕಾರಿ ನಾಝಿಮ್, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕಾರ್ಯದರ್ಶಿ ಮುಸ್ತಫಾ ಮದನಿನಗರ, ಇಸಾಕ್ ಸಹಿತ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಇದ್ದು, ಸೂಕ್ತ ವ್ಯವಸ್ಥೆ ಮಾಡಿದರು.

ಈ ವೇಳೆ ದರ್ಗಾ ಮಾಜಿ ಅಧ್ಯಕ್ಷ ಕಣಚೂರು ಮೋನು, ಕಣಚೂರು ಮೆಡಿಕಲ್ ಕಾಲೇಜು ನಿರ್ದೇಶಕ ಅಬ್ದುಲ್ ರಹ್ಮಾನ್ ಭೇಟಿ ನೀಡಿ ಶ್ಲಾಘನೆ ವ್ಯಕ್ತಪಡಿಸಿದರು.



 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News