×
Ad

ಮಂಗಳೂರು: ಸಿಂಧೂರ ವಿಜಯೋತ್ಸವ ಕಾರ್ಯಕ್ರಮ

Update: 2025-05-20 21:41 IST

ಮಂಗಳೂರು: ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಸಿಂಧೂರ ವಿಜಯೋತ್ಸವ ಸಮಿತಿ ಮಂಗಳೂರು ಇದರ ವತಿಯಿಂದ ಮಂಗಳವಾರ ನಗರದ ಪಿವಿಎಸ್ ವೃತ್ತದಿಂದ ಲಾಲ್‌ಬಾಗ್‌ವರೆಗೆ ಮೆರವಣಿಗೆ ನಡೆಯಿತು.

ಬಳಿಕ ಕರಾವಳಿ ಮೈದಾನದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನೇವಿಯ ನಿವೃತ್ತ ಅಧಿಕಾರಿ ಸುಧೀರ್ ಪೈ ಭಾರತೀಯ ಸೇನೆಯ ಆಪರೇಷನ್ ಸಿಂಧೂರಕ್ಕೆ ಭಾರೀ ಗೆಲುವಾಗಿದೆ. ದೇಶದ ಸೈನ್ಯ ಹಾಗೂ ಕಾರ್ಯಾಚರಣೆ ಬಗ್ಗೆ ನಾವೆಲ್ಲರೂ ಹೆಮ್ಮೆ ಪಡಬೇಕಿದೆ ಎಂದರು.

ಸಿಂಧೂರ ವಿಜಯೋತ್ಸವ ಸಮಿತಿ ಸಂಚಾಲಕ ಕೇಶವ ನಂದೋಡಿ ಅಧ್ಯಕ್ಷತೆ ವಹಿಸಿದ್ದರು. ಲೇಖಕಿ ರಶ್ಮಿ ಸಾಮಂತ್ ಉಡುಪಿ ಮಾತನಾಡಿದರು. ಗುರುಪುರ ವಜ್ರದೇಹಿ ಮಠದ ರಾಜಶೇಖರನಾನಂದ ಸ್ವಾಮೀಜಿ, ಶ್ರೀ ಕ್ಷೇತ್ರ ಒಡಿಯೂರಿನ ಗುರುದೇವಾನಂದ ಸ್ವಾಮೀಜಿ, ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಮಂಗಳೂರಿನ ಓಂ ಶ್ರೀ ಮಠದ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಮಾತಾಶ್ರೀ ಶಿವಜ್ಞಾನಮಯಿ ಸರಸ್ವತಿ, ಶಂಕರಪುರದ ಶ್ರೀ ಸಾಯಿ ಈಶ್ವರ್ ಗುರೂಜಿ, ಕಲ್ಲಡ್ಕ ಪ್ರಭಾಕರ ಭಟ್, ಕಮಲಾ ಪ್ರಭಾಕರ ಭಟ್, ವಿಹಿಂಪ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್, ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ, ಶಾಸಕರಾದ ಡಿ. ವೇದವ್ಯಾಸ ಕಾಮತ್, ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಕಿಶೋರ್ ಕುಮಾರ್, ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮುಂತಾದವರು ಉಪಸ್ಥಿತರಿದ್ದರು.








 


 


 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News