×
Ad

ಮಾದಕ ವಸ್ತು ಸೇವನೆ ಆರೋಪ: ಯುವಕ ಸೆರೆ

Update: 2025-05-20 21:44 IST

ಮಂಗಳೂರು: ನಗರದ ಸೆಂಟ್ರಲ್ ರೈಲು ನಿಲ್ದಾಣ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ್ದ ಆರೋಪದ ಮೇರೆಗೆ ಪ್ರವೀಣ್ ಹಾಲಪ್ಪ (20) ಎಂಬಾತನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಜಲಗೇರಿ ತಾಂಡದವನಾಗಿರುವ ಈತ ಬೈಕಂಪಾಡಿ ಮೀನಕಳಿಯದಲ್ಲಿ ವಾಸವಾಗಿದ್ದ. ಆರೋಪಿಯ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News