×
Ad

ಕಾಂಗ್ರೆಸ್ ಪಕ್ಷ ಚಟುವಟಿಕೆಗಳಿಂದ ಹಿಂದೆ ಸರಿಯಲು ನಿರ್ಧಾರ: ಕೊಳ್ನಾಡು ಗ್ರಾಪಂ ಉಪಾಧ್ಯಕ್ಷೆ ಅಸ್ಮಾ ಹಸೈನಾರ್

Update: 2025-05-30 15:09 IST

ವಿಟ್ಲ: ದ.ಕ. ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ತಡೆಯುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕೆಲಸ ಕಾರ್ಯಗಳಿಂದ ಹಿಂದೆ ಸರಿದು ತಟಸ್ಥವಾಗಿರಲು ನಿರ್ಧರಿಸಿದ್ದೇನೆ ಎಂದು ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಅಸ್ಮಾ ಹಸೈನಾರ್ ಹೇಳಿದ್ದಾರೆ.

ವಿಟ್ಲ ಪ್ರೆಸ್ ಕ್ಲಬ್ ನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು ಬೇಸರ ಉಂಟು ಮಾಡಿದೆ. ರಸ್ತೆಯಲ್ಲಿ ನಡೆದಾಡಲು ಜನಸಾಮಾನ್ಯರು ಭಯಭೀತರಾಗುತ್ತಿದ್ದಾರೆ. ಆದ್ದರಿಂದ ದುಷ್ಕೃತ್ಯ ಎಸಗುವ ದುಷ್ಕರ್ಮಿಗಳನ್ನು, ಕುಮ್ಮಕ್ಕು ನೀಡುವ ಸಂಘಟನೆಗಳ ಮುಖಂಡರನ್ನು ಹಾಗೂ ಪ್ರಚೋದನಕಾರಿ ಭಾಷಣ ಮಾಡುವವರ ಮೇಲೆ ಸರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಿಲ್ಲೆಯ ಶಾಂತಿ ಕಾಪಾಡುವಲ್ಲಿ ವಿಫಲರಾದ ಗೃಹಸಚಿವರು ಹಾಗೂ ಉಸ್ತುವಾರಿ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಮಂಜುನಾಥ ಭಂಡಾರಿ ಅವರಿಗೆ ಅಥವಾ ಮಾಜಿ ಸಚಿವ ರಮಾನಾಥ ರೈ ಅವರನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡಿಯಾದರೂ ಉಸ್ತುವಾರಿ ಸಚಿವರನ್ನಾಗಿಸಬೇಕು ಎಂದು ಅಸ್ಮಾ ಹಸೈನಾರ್ ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News