×
Ad

ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ಪೋಸ್ಟ್: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Update: 2025-06-01 23:38 IST

ಬೆಳ್ತಂಗಡಿ; ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬ ಸಮಾಜಿಕ ಜಾಲತಾಣವಾದ Instagram ನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ಪೋಸ್ಟ್ ಹಾಕಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ʼಬಂಟ್ವಾಳ ಹಿಂದೂ ವಾರಿಯರ್ʼ ಎಂಬ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವಂತಹ ಹಾಗು ಕೋಮು ಸೌಹಾರ್ದತೆಯನ್ನು ಹಾಳುಗೆಡವುವಂತಹ ಪೋಸ್ಟ್ ಪ್ರಸಾರ ಮಾಡಿದ್ದು ಇದರಿಂದಾಗಿ ಕಾನೂನು ಸುವ್ಯಸ್ಥೆಗೆ ಧಕ್ಕೆ ಯಾಗುವ ಸಾಧ್ಯತೆಗಳಿದ್ದು ಇದರ ಬಗ್ಗೆ ಪೋಸ್ಟ್ ಹಾಕಿದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ 1ರಂದು ಕಲಂ 196(1)(ಎ) 353(1)(ಸಿ) ಬಿ.ಎನ್ ಎಸ್ 2023 ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News