×
Ad

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ| ಬೆಳ್ತಂಗಡಿಯಲ್ಲಿ ಪ್ರಮುಖ ಇಬ್ಬರು ಆರೋಪಿಗಳ ಸ್ಥಳ ಮಹಜರು

Update: 2025-06-02 22:27 IST

ಬೆಳ್ತಂಗಡಿ : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಸೋಮವಾರ ಸಂಜೆ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದೀಪಕ್(21) ಮತ್ತು ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ(27) ಎಂಬವರನ್ನು ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಜೂ.2 ರಂದು ಗುರುವಾಯನಕೆರೆಯ ಅಂಗಡಿ, ಬೆಳ್ತಂಗಡಿಯ ಸಂತೆಕಟ್ಟೆ ಮೊಬೈಲ್ ಅಂಗಡಿ, ಬೆಳ್ತಂಗಡಿ ಮೂರು ಮಾರ್ಗದ ಬಳಿ, ಉಜಿರೆಯ ನಿಡಿಗಲ್ ನದಿಯ ಬಳಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.

ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ದೀಪಕ್ ಮತ್ತು ಸುಮಿತ್ ಆಚಾರ್ಯ ರಹಿಮಾನ್ ಕೊಲೆ ಮಾಡಿದ ಬಳಿಕ ಬೈಕ್ ಮೂಲಕ ಬೆಳ್ತಂಗಡಿ ಕಡೆ ಪ್ರಯಾಣ ಮಾಡಿದ್ದಾರೆ. ಈ ವೇಳೆ ಗುರುವಾಯನಕೆರೆಯ ಅಂಗಡಿಯೊಂದರಲ್ಲಿ ರೈನ್ ಕೋಟ್ ಖರೀದಿ ಮಾಡಿ ಬೆಳ್ತಂಗಡಿಯ ಸಂತೆಕಟ್ಟೆ ಮೊಬೈಲ್ ಶಾಪ್ ಗೆ ಬಂದು ಸೀಮ್ ರಿಮೂವ್ ಮಾಡುವ ಇಜೆಕ್ಟರ್ ಪಡೆದುಕೊಂಡು ಆರೋಪಿಗಳು ತಮ್ಮ ಮೊಬೈಲ್ ನಿಂದ ಸೀಮ್ ತೆಗೆದು ಮೂರು ಮಾರ್ಗದ ಬಳಿಯ ಚರಂಡಿಗೆ ಸಿಮ್ ಬಿಸಾಕಿ, ಕಲ್ಮಂಜ ಗ್ರಾಮದ ನಿಡಿಗಲ್ ನದಿಗೆ ತಮ್ಮ ಮೊಬೈಲ್ ಬಿಸಾಕಿ ಚಿಕ್ಕಮಗಳೂರು ಕಡೆ ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News