×
Ad

ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿ ಸೆರೆ

Update: 2025-06-03 19:37 IST

ಮಂಗಳೂರು, ಜೂ.3: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೂಲತಃ ಬಜ್ಪೆ ಶಾಂತಿಗುಡ್ಡದ ಪ್ರಸಕ್ತ ಕೆಂಜಾರಿನಲ್ಲಿ ವಾಸವಾಗಿದ್ದ ಅಬ್ದುಲ್ ರಝಾಕ್ (59) ಎಂದು ಗುರುತಿಸಲಾಗಿದೆ.

ಈತನು ಪ್ರಕರಣದ ಪ್ರಮುಖ ಆರೋಪಿಗಳ ಪೈಕಿ ತನ್ನ ಪುತ್ರ ಮುಹಮ್ಮದ್ ಮುಝಮ್ಮಿಲ್ ಮತ್ತು ಅಳಿಯ ನೌಷಾದ್ ವಾಮಂಜೂರು ಯಾನೆ ಚೊಟ್ಟೆ ನೌಷಾದ್ ಹಾಗೂ ಇತರ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದ ತನಿಖೆಯ ಮುಂದುವರಿದಿದೆ. ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News