×
Ad

ಇಂದಿರಾ ಕ್ಯಾಂಟೀನ್ ಮೂಲಕ ಗುಣಮಟ್ಟದ ಆಹಾರ: ದಿನೇಶ್ ಗೂಂಡೂರಾವ್

Update: 2025-06-04 17:58 IST

ಮಂಗಳೂರು: ಹಸಿವು ಮುಕ್ತ ರಾಜ್ಯದ ಪರಿಕಲ್ಪನೆಯೊಂದಿಗೆ ಮಿತ ದರದಲ್ಲಿ ಉತ್ತಮ ಆಹಾರ ಒದಗಿ ಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಹಿಂದಿನ ಆಡಳಿತ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಿದ್ದರು. ಇದೀಗ ಸಾರ್ವಜನಿಕರ ಬೇಡಿಕೆಯ ಮೇರೆಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ತೆರೆಯಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮೂಡಬಿದಿರೆಯಲ್ಲಿ ಬುಧವಾರ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ಬಳಿಕ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ಸರಕಾರದ ಸೌಲಭ್ಯಗಳು ನೇರವಾಗಿ ಜನರಿಗೆ ಸಿಗಬೇಕೆಂಬ ಕಲ್ಪನೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರದ್ದಾಗಿತ್ತು. ಅವರ ಹೆಸರಿನಲ್ಲಿಯೇ ಇಂದಿರಾ ಕ್ಯಾಂಟೀನ್‌ಗಳ ಮೂಲಕ ಕೂಲಿ ಕಾರ್ಮಿಕರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳಿಗೆ ಆಹಾರ ಒದಗಿಸುವ ಕಾರ್ಯ ನಡೆಯುತ್ತಿದೆ ಎಂದವರು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಡಾ. ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್, ನಗರ ಸಭೆ ಅಧ್ಯಕ್ಷೆ ಜಯಶ್ರೀ ಕೇಶವ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇಂದಿರಾ ಕ್ಯಾಂಟೀನ್‌ನಲ್ಲಿ ಉಪಹಾರ ಸವಿದ ಉಸ್ತುವಾರಿ

ಮೂಡಬಿದಿರೆಯಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಉಸ್ತುವಾರಿ ಸಚಿವರು ಕ್ಯಾಂಟೀನ್ ಒಳಗಡೆ ಕೇಸರಿಬಾತು ಹಾಗೂ ಉಪ್ಪಿಟ್ಟು ಸವಿದರು. ನಿತ್ಯವೂ ಜನಸಾಮಾನ್ಯರಿಗೆ ಗುಣಮಟ್ಟದ ಆಹಾರ ಪೂರೈಸುವಂತೆ ಸೂಚನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News