×
Ad

ಪುತ್ತೂರು| ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ: ಗಣೇಶ್ ಪ್ರಸಾದ್ ವಿರುದ್ಧ ಪ್ರಕರಣ ದಾಖಲು

Update: 2025-06-04 21:18 IST

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಗಾಳಿ ಸುದ್ದಿಯನ್ನು ಹರಡಿದ್ದಲ್ಲದೆ, ಸ್ಥಳೀಯಾಡಳಿತಕ್ಕೆ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಕಬಕ ಮೂಲದ ಗಣೇಶ್ ಪ್ರಸಾದ್  ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವ್ಯಕ್ತಿಯೋರ್ವನ ಗಡಿಪಾರಿಗೆ ಸಂಬಂಧಿಸಿದ ವಿಚಾರದಲ್ಲಿ ವಾಟ್ಸ್ ಆಪ್ ಮೂಲಕ ಉದ್ದೇಶಪೂರ್ವಕವಾಗಿ ಸಾರ್ವಜನಿಕರಿಗೆ ಗಾಳಿ ಸುದ್ದಿಯನ್ನು ಹರಡುತ್ತಾ ಹಾಗೂ ಸ್ಥಳಿಯ ಆಡಳಿತಕ್ಕೆ ಬೆದರಿಕೆ ಒಡ್ಡಿರುವ ಕಾರಣ ನ್ಯಾಯಾಲಯದ ಅನುಮತಿ ಪಡೆದು ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ: 41/2025 ಕಲಂ: 353(1), (b), 351(3) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News