ಮಂಗಳೂರು: ರಥಬೀದಿ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ
Update: 2025-06-05 20:45 IST
ಮಂಗಳೂರು, ಜೂ.5: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ- ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶದ ವತಿುಂದ ಅಂತಿಮ ವರ್ಷದ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಬುಧವಾರ ನಡೆಯಿತು.
ಎನ್‌ಐಐಟಿ-ಐಎಫ್‌ಬಿಐ ಮಂಗಳೂರು ಕೇಂದ್ರ ಮುಖ್ಯಸ್ಥೆ ಪವಿತ್ರ ವಿಕಾಶ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಡಾ. ಜಯಕರ ಭಂಡಾರಿ ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್ ನೇಮಕಾತಿ ಪ್ರಕ್ರಿಯೆಯ ಹಂತಗಳನ್ನು ವಿವರಿಸಿದರು.
ಐಕ್ಯೂಎಸಿ ಸಹಸಂಯೋಜಕಿ ಡಾ. ಜ್ಯೋತಿಪ್ರಿಯಾ ಮತ್ತಿತರರು ಉಪಸ್ಥಿತರಿದ್ದರು. ಉದ್ಯೋಗ ಕೋಶದ ಸಂಚಾಲಕಿ ಡಾ. ಮಾಲತಿ ಕೆ. ಕಾರ್ಯಕ್ರಮ ನಿರ್ವಹಿಸಿದರು. ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ.ಲೋಕೇಶ್‌ನಾಥ್ ಬಿ.ಮತ್ತಿತರರು ಸಹಕರಿಸಿದರು. ಕಂಪ್ಯೂಟರ್ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ರಘುಪತಿ ವಂದಿಸಿದರು.