×
Ad

ಅರುಣ್‌ ಪುತ್ತಿಲ ಗಡಿಪಾರಿಗೆ ಸಮರ್ಪಕ ದಾಖಲೆ ಕೊಡಿ: ಉಪ ವಿಭಾಗಾಧಿಕಾರಿ ಆದೇಶ

Update: 2025-06-06 20:26 IST

ಅರುಣ್ ಪುತ್ತಿಲ

ಪುತ್ತೂರು: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಪುತ್ತಿಲ ಅವರ ಗಡಿಪಾರು ನೋಟೀಸ್ ಗೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆ ನಡೆಸಿದ ಪುತ್ತೂರು ಉಪವಿಭಾಗ ಅಧಿಕಾರಿಗಳ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದೆ.

ಅರುಣ್ ಕುಮಾರ್ ಪುತ್ತಿಲ ಅವರನ್ನು ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ನೋಟಿಸ್‌ ನೀಡಿ ಜೂನ್ 6ರಂದು ಪುತ್ತೂರು ಉಪ ವಿಭಾಗಾಧಿಕಾರಿ ಮುಂದೆ ಈ ಬಗ್ಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಇದರಂತೆ, ಅರುಣ್ ಪುತ್ತಿಲ ಪರವಾಗಿ ವಕೀಲ ನರಸಿಂಹ ಪ್ರಸಾದ್ ಹಾಜರಾಗಿ ವಾದ ಮಂಡಿಸಿದ್ದರು.

ಉಪವಿಭಾಗ ಅಧಿಕಾರಿಗಳ ನ್ಯಾಯಾಲಯದ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಹಾಜರಿದ್ದರೂ, ಸಮರ್ಪಕ ದಾಖಲೆಗಳನ್ನು ಒದಗಿಸದ ಕಾರಣ ಉಪ ವಿಭಾಗಾಧಿಕಾರಿ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ್ದು, ಪೊಲೀಸರು ಸಮರ್ಪಕ ದಾಖಲೆ ಒದಗಿಸುವಂತೆ ಆದೇಶ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ವೇಳೆ, ಇಂದು ಪುತ್ತೂರು ಉಪವಿಭಾಗದ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ನೋಟಿಸ್‌ ಪಡೆದ 9 ಮಂದಿ ವಿಚಾರಣೆಗೆ ಹಾಜರಾಗಿದ್ದರು. ವಾರದ ಹಿಂದೆ ನೀಡಿದ್ದ ನೋಟೀಸಿನಲ್ಲಿ ತಾವು ಖುದ್ದಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರಿಂದ ಅರುಣ್ ಪುತ್ತಿಲ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News