×
Ad

ಅಶ್ರಫ್ ಕಿನಾರ ವಿರುದ್ಧ ಪ್ರಕರಣ ದಾಖಲು: ಕರ್ನಾಟಕ ಮುಸ್ಲಿಂ ಜಮಾಅತ್ ಖಂಡನೆ

Update: 2025-06-08 20:44 IST

ಅಶ್ರಫ್ ಕಿನಾರ

ಮಂಗಳೂರು: ಸಾಮಾಜಿಕ ಜಾಲತಾಣವಾದ ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶವನ್ನು ಇನ್ನೊಂದು ಗ್ರೂಪ್‌ಗೆ ರವಾನಿಸಿದ್ದಾರೆ ಎಂಬ ಕಾರಣಕ್ಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ, ಸಾಮಾಜಿಕ ಕಾರ್ಯಕರ್ತ ಅಶ್ರಫ್ ಕಿನಾರ ಅವರ ವಿರುದ್ಧ ಪ್ರಕರಣ ದಾಖಲಾಯಿಸಿದ ಕ್ರಮವನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ಖಂಡಿಸಿದೆ.

ಸಮುದಾಯಕ್ಕೆ ಅನ್ಯಾಯವಾದಾಗ ಸರಕಾರದ ನಡೆಯನ್ನು ವಿರೋಧ ವ್ಯಕ್ತಪಡಿಸುವುದು ಪ್ರಜಾಪ್ರಭುತ್ವ ದಲ್ಲಿ ಸಾಮಾನ್ಯವಾದ ಪ್ರಕ್ರಿಯೆಯಾಗಿದೆ. ಅದಕ್ಕಾಗಿ ರವಾನಿಸಿದ ವಾಟ್ಸ್‌ಆ್ಯಪ್ ಸಂದೇಶವನ್ನು ನೆಪವಾಗಿ ಅಶ್ರಫ್ ಕಿನಾರ ವಿರುದ್ಧ ಕೇಸು ದಾಖಲಿಸಿರುವುದು ಸರಿಯಲ್ಲ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಾಧ್ಯಕ್ಷ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬೂಸುಫ್ಯಾನ್ ಇಬ್ರಾಹಿಂ ಮದನಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News