ಕಡಬ: ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ; ಆರೋಪಿ ವಶಕ್ಕೆ
Update: 2025-06-08 22:35 IST
ಕಡಬ, ಜೂ.8: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ಬಜಕೆರೆ ರೈಲ್ವೆ ನಿಲ್ದಾಣದ ಬಳಿ ವ್ಯಕ್ತಿಯೋರ್ವ ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಹನುಮಂತಪ್ಪ ಎಂಬವರಿಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆ ನಡೆದ ಸ್ಥಳವು ರೈಲ್ವೆ ಇಲಾಖೆಯ ಮಂಗಳೂರು ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದೆ. ಹಾಗಾಗಿ ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಟನೆಯಲ್ಲಿ ಗಾಯಗೊಂಡಿದ್ದ ಹನುಮಂತಪ್ಪ ಎಂಬಾತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.