ಪಣಂಬೂರು| ಟ್ಯಾಂಕರ್ ಢಿಕ್ಕಿ: ದ್ವಿಚಕ್ರ ವಾಹನ ಸಹಸವಾರ ಸ್ಥಳದಲ್ಲೇ ಮೃತ್ಯು
Update: 2025-06-09 22:58 IST
ಪಣಂಬೂರು: ದ್ವಿಚಕ್ರ ವಾಹನವೊಂದಕ್ಕೆ ಟ್ಯಾಂಕರ್ ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸಹಸವಾರ ಟ್ಯಾಂಕರ್‌ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಗೊಂಡಿರುವ ಘಟನೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಬಳಿ ಸೋಮವಾರ ರಾತ್ರಿ ನಡೆದಿದೆ.
ಮೃತರನ್ನು ಸುರತ್ಕಲ್ ಕಾನ ಜನತಾ ಕಾಲನಿ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದ್ದು, ಮುಲ್ಕಿ ಕೊಲ್ನಾಡು ನಿವಾಸಿ ಮುಹಮ್ಮದ್ ಶರೀಫ್ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಶ್ರಫ್ ಮತ್ತು ಶರೀಫ್ ಅವರು ಮಂಗಳೂರು ಕಡೆಯಿಂದ ಸುರತ್ಕಲ್ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಹಾಸನದಿಂದ ಸುರತ್ಕಲ್ ಎಚ್ ಪಿಸಿಎಲ್ ಗೆ ಗ್ಯಾಸ್ ತುಂಬಲು ಹೋಗುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.