×
Ad

ಬಿಜೆಪಿ ನಾಯಕರಿಂದ ಅರಾಜಕತೆ ಸೃಷ್ಟಿಗೆ ಹುನ್ನಾರ: ಮಂಜುನಾಥ್ ಭಂಡಾರಿ

Update: 2025-06-10 21:47 IST

ಮಂಜುನಾಥ್ ಭಡಾರಿ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸಲು ಬಿಜೆಪಿ ರಾಜ್ಯ ನಾಯಕರು ಹುನ್ನಾರ ನಡೆಸು ತ್ತಿದ್ದು, ಇದಕ್ಕೆ ಅಧಿಕಾರಿಗಳ ಸಭೆಯಲ್ಲಿ ಬಿಜೆಪಿಗರು ನಡೆದುಕೊಂಡ ರೀತಿಯೇ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಡಾರಿ ಹೇಳಿದ್ದಾರೆ.

ದ.ಕ. ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಅಶೋಕ್ ನೇತೃತ್ವದ ನಿಯೋಗ ದ.ಕ. ಜಿಲ್ಲೆಗೆ ಆಗಮಿಸಿ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ದುಂಡಾವರ್ತನೆ ತೋರಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಜಿಲ್ಲೆಯಲ್ಲಿ ಶಾಂತಿ ನೆಲೆಸು ವುದು ಬಿಜೆಪಿಯ ರಾಜ್ಯ ನಾಯಕರಿಗೆ ಬೇಕಾಗಿಲ್ಲ. ಕರಾವಳಿ ಮೂಲಕ ತಮ್ಮ ಓಟ್ ಬ್ಯಾಂಕ್ ಭದ್ರಪಡಿ ಸಲು ಹೊರಟ ಬಿಜೆಪಿ ರಾಜ್ಯ ನಾಯಕರು ಕರಾವಳಿಯನ್ನು ಬಲಿಪಶು ಮಾಡುತ್ತಿದ್ದಾರೆ. ಕರಾವಳಿ ಭಾಗ ದಲ್ಲಿ ಅಶಾಂತಿ ಸೃಷ್ಟಿಸಿ ರಾಜ್ಯದಲ್ಲಿ ಅಧಿಕಾರ ಪಡೆಯಲು ಬಿಜೆಪಿಗರು ಹುನ್ನಾರ ಮಾಡುತ್ತಿದ್ದಾರೆ ಎಂದು ಭಂಡಾರಿ ಆರೋಪಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಜಿಲ್ಲಾ ಎಸ್ಪಿಡಾ. ಅರುಣ್ ಜಿಲ್ಲೆಯ ಕಾನೂನು ಸುವ್ಯವಸ್ಥೆ ನಿಟ್ಟಿನಲ್ಲಿ ತನ್ನದೇ ಶೈಲಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಬಿಜೆಪಿ ನಾಯಕರಿಗೆ ಈ ಜಿಲ್ಲೆಯ ಶಾಂತಿ ಬೇಕಾಗಿಲ್ಲ. ಜಿಲ್ಲೆಯ ಬಗ್ಗೆ ನಿಜವಾಗಿಯೂ ಕಾಳಜಿಯಿದ್ದರೆ ಬಿಜೆಪಿ ನಾಯಕರು ಅಧಿಕಾರಿಗಳ ಕಾರ್ಯಶೈಲಿಗೆ ಸಾಥ್ ನೀಡಬೇಕಿತ್ತು. ಅದನ್ನು ಬಿಟ್ಟು ಅಧಿಕಾರಿಗಳಿಗೆ ಪರೋಕ್ಷವಾಗಿ ಧಮ್ಕಿ ಹಾಕುತ್ತಿದ್ದಾರೆ ಎಂದು ಮಂಜುನಾಥ ಭಂಡಾರಿ ಟೀಕಿಸಿದ್ದಾರೆ.

ಬಿಜೆಪಿ ಈ ಹಿಂದೆ 5 ವರ್ಷ ರಾಜ್ಯದಲ್ಲಿ ಆಡಳಿತ ನಡೆಸಿದ್ದು, ಯಾವ ರೀತಿ ಆಡಳಿತ ನಡೆಸಿದ್ದಾರೆ ಎನ್ನು ವುದು ರಾಜ್ಯದ ಜನರಿಗೆ ಗೊತ್ತಿದೆ. ಈಗ ಬಿಜೆಪಿಯವರಿಗೆ ವಿರೋಧ ಪಕ್ಷದ ಸ್ಥಾನದಲ್ಲಿರುವಂತೆ ಮತದಾರರು ತೀರ್ಪು ನೀಡಿದ್ದು, ಅದಕ್ಕೆ ತಕ್ಕಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಲಿ. ಬಿಜೆಪಿ ನಾಯಕರ ದುಂಡಾವರ್ತನೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ತೆರಬೇಕಾದೀತು. ಜಿಲ್ಲೆಯ ಜನ ಬುದ್ಧಿವಂತರು, ವಿನಯಶೀಲರು. ಹಿಂದುತ್ವದ ಟ್ರಂಪ್ ಕಾರ್ಡ್‌ನಲ್ಲಿ ಇನ್ನು ನಿಮ್ಮ ಯಾವ ಆಟವೂ ನಡೆಯಲ್ಲ ಎಂದು ಭಂಡಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News