ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Update: 2025-06-12 20:58 IST
ಮಂಗಳೂರು, ಜೂ.12: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಜನಾಡಿಯ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜಿಗೆ ಇಂಗ್ಲಿಷ್, ಭೌತಶಾಸ್ತ್ರ, ರಾಸಾಯನ ಶಾಸ್ತ್ರ, ಗಣಿತ, ಜೀವಶಾಸ್ತ್ರ ವಿಷಯಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಎಂಎ/ಎಂಎಸ್ಸಿ ಬಿಎಡ್ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗೌರವಧನ 14,000 ರೂ. ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ:9620439218 ಅಥವಾ ಮಂಜನಾಡಿಯಲ್ಲಿರುವ ಕಾಲೇಜಿನ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.