×
Ad

ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿಗೆ ಪರೀಕ್ಷೆ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

Update: 2025-06-13 21:13 IST

ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳ ಮಹಿಳಾ ಮತ್ತು ಪುರುಷ ಯುವ ಜನರಿಗೆ 90 ದಿನಗಳ ವಸತಿಯುತ ಸೌಭ್ಯದೊಂದಿಗೆ Police Sub Inspector ನೇಮಕಾತಿ ಪರೀಕ್ವಾ ಪೂರ್ವ ತರಬೇತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು https://sevasindhuservices.karnataka.gov.in ಅಥವಾ www.dom.karnataka.gov.in ವೆಬ್‌ಸೈಟ್ ಮೂಲಕ ಜೂ.15ರವರೆಗೆ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳ ಸಾಮಾನ್ಯ ಅರ್ಹತೆ ಮತ್ತು ಇತರ ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ https://dom.karnataka.gov.in ಅಥವಾ ಸಹಾಯವಾಣಿ: 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News