×
Ad

ದೇರಳಕಟ್ಟೆ: ವಿದ್ಯಾರ್ಥಿಗಳಿದ್ದ ಹಾಸ್ಟೆಲ್‌ ಕಟ್ಟಡದಲ್ಲಿ ಬೆಂಕಿ

Update: 2025-06-15 20:27 IST

ಉಳ್ಳಾಲ: ಎನ್‌ ಆರ್‌ ಐ ವಿದ್ಯಾರ್ಥಿಗಳಿದ್ದ ದೇರಳಕಟ್ಟೆಯ ಹಾಸ್ಟೆಲ್‌ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಜನರೇಟರ್‌ ಕೊಠಡಿಯಲ್ಲಿ ಬೆಂಕಿ ಹೊತ್ತಿಕೊಂಡಿರುವುದು ತಿಳಿದುಬಂದಿದೆ.

ದೇರಳಕಟ್ಟೆ ಜಂಕ್ಷನ್‌ ನಲ್ಲಿರುವ ವೆಂಕಟ್‌ ರೆಸಿಡೆನ್ಸಿಯ ಜನರೇಟರ್‌ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೇಲಿನ ಎರಡು ಮಹಡಿಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಲಿಯುತ್ತಿರುವ ಎನ್‌ ಆರ್‌ ಐ ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದ್ದು, ಅವರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯವನ್ನು ನಡೆಸಿದೆ.







 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News