×
Ad

ಇರಾನ್‌ನಲ್ಲಿ ಕಲಿಯುವ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ: ಡಾ. ಆರತಿ ಕೃಷ್ಣ

Update: 2025-06-16 18:37 IST

ಡಾ. ಆರತಿ ಕೃಷ್ಣ

ಮಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯು ಅಲ್ಲಿ ನೆಲೆಸಿರುವ ಭಾರತೀಯರಿಗೆ ಆತಂಕ ಉಂಟು ಮಾಡಿದೆ. ರಾಜ್ಯದ 9 ವಿದ್ಯಾರ್ಥಿಗಳು ಇರಾನ್‌ನ ರಾಜಧಾನಿ ಟೆಹರಾನ್‌ನಲ್ಲಿ ವೈದ್ಯಕೀಯ ಶಿಕ್ಷಣ ಕಲಿಯುತ್ತಿದ್ದು, ಉದ್ವಿಗ್ನ ಪರಿಸ್ಥಿತಿಯಿಂದ ಆತಂಕ ಗೊಂಡಿರುತ್ತಾರೆ. ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷ ಡಾ. ಆರತಿ ಕೃಷ್ಣ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ಪೈಕಿ ನದೀಮ್ ಹುಸೇನ್ ಹಾಗೂ ಬೆಂಗಳೂರಿನಲ್ಲಿರುವ ಅವರ ಪೋಷಕರು ಅನಿವಾಸಿ ಭಾರತೀಯ ಸಮಿತಿಯ ಬೆಂಗಳೂರು ಕಚೇರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿ ಆತಂಕ ತೋಡಿಕೊಂಡಿದ್ದಾರೆ. ಸ್ವದೇಶಕ್ಕೆ ಮರಳಲು ಇಚ್ಛೆ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದು ಇರಾನ್‌ನಲ್ಲಿ ನೆಲೆಸಿರುವ ಈ ವಿದ್ಯಾರ್ಥಿ ಗಳನ್ನು ಕರೆತರಲು ಕ್ರಮಗಳನ್ನು ಕೈಗೊಳ್ಳುವಂತೆ ಕೋರಲಾಗಿದೆ. ಅಲ್ಲದೆ ದೂರವಾಣಿ ಮೂಲಕ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಖುದ್ದು ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅನಿವಾಸಿ ಭಾರತೀಯ ಸಮಿತಿ ವಿಶೇಷ ಕರ್ತವ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News