×
Ad

ಮಂಗಳೂರು: ನೀಟ್ ಸಾಧಕರಿಗೆ ಸನ್ಮಾನ

Update: 2025-06-17 20:39 IST

ಮಂಗಳೂರು, ಜೂ.17: ಈ ವರ್ಷದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನ ಮಾಡಿದರು.

ಎಕ್ಸ್‌ಪರ್ಟ್ ಕಾಲೇಜಿನ ವಿದ್ಯಾರ್ಥಿಗಳಾದ ಅಖಿಲ ಭಾರತ ಮಟ್ಟದ 17ನೇ ರ್ಯಾಂಕ್ ಮತ್ತು ರಾಜ್ಯ ಮಟ್ಟದ ಪ್ರಥಮ ರ್ಯಾಂಕ್ ನಿಖಿಲ್ ಸೊನ್ನದ್ ಹಾಗೂ ಅಖಿಲ ಭಾರತ 84ನೇ ರ್ಯಾಂಕ್ ಮತ್ತು ರಾಜ್ಯಮಟ್ಟದ 7ನೇ ರ್ಯಾಂಕ್ ಕೆ.ಜಿ. ನಿಧಿ ಅವರಿಗೆ ಜಿಲ್ಲಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಎಕ್ಸ್‌ಪರ್ಟ್ ವಿದ್ಯಾಸಂಸ್ಥೆಗಳ ಮುಖ್ಯಸ್ಥ ನರೇಂದ್ರ ನಾಯಕ್, ವಿದ್ಯಾರ್ಥಿಗಳ ಪಾಲಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News