×
Ad

ರೆಂಜಾಳ ರಾಮಕೃಷ್ಣ ರಾವ್ ಗೆ ಅಂಬುರುಹ ಯಕ್ಷಸದನ ಪ್ರಶಸ್ತಿ

Update: 2025-06-18 18:12 IST

ಕೊಣಾಜೆ: ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ (ರಿ.) ಮಂಜನಾಡಿ ಸಂಸ್ಥೆಯು ಯಕ್ಷಗಾನ ಸವ್ಯಸಾಚಿ, ಅಭಿನವ ವಾಲ್ಮೀಕಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಸಂಸ್ಮರಣಾರ್ಥ 'ಅಂಬುರುಹ ಯಕ್ಷಸದನ ಪ್ರಶಸ್ತಿ' ಗೆ ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಸಿದ್ಧ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಇವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು 10,000 ನಗದು, ಪ್ರಶಸ್ತಿ ಫಲಕ ಸಹಿತ ಸಮ್ಮಾನವನ್ನು ಒಳಗೊಂಡಿದ್ದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂನ್ 21 ಶನಿವಾರದಂದು ಮಧ್ಯಾಹ್ನ 3 ಗಂಟೆಗೆ ಪನೀರು ಕ್ಯಾಂಪಸ್ ನಲ್ಲಿರುವ ನಿಟ್ಟೆ ವಿಶ್ವವಿದ್ಯಾನಿಲಯದ ಡಾ. ಕೆ.ಆರ್ ಶೆಟ್ಟಿ ತುಳು ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಬಳಿಕ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ 'ಗಾಂಡೀವ ನಿಂದನ' ಆಖ್ಯಾನದ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News