×
Ad

ಅಲ್ಪಸಂಖ್ಯಾತರ ಸಂಶೋಧನಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Update: 2025-06-19 17:55 IST

ಮಂಗಳೂರು: ರಾಜ್ಯದ ಅಂಗೀಕೃತ ವಿವಿಗಳಲ್ಲಿ ಪೂರ್ಣಕಾಲಿಕವಾಗಿ ಪಿಎಚ್‌ಡಿ ಸಂಶೋಧನೆ ಮಾಡುತ್ತಿರುವ ದ.ಕ.ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಸಂಶೋಧನಾರ್ಥಿಗಳಿಂದ 2025-26ನೇ ಸಾಲಿನ ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಜೆಆರ್‌ಎಫ್ ಮಾದರಿಯಲ್ಲಿ ಫೆಲೋಶಿಪ್ ನೀಡಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟಂಬರ್ ೩೦ ಕೊನೆಯ ದಿನಾಂಕವಾಗಿದ್ದು, ಆಸಕ್ತರು ಸೇವಾಸಿಂದು ಪೋರ್ಟಲ್ https://sevasindhuservices.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in ಅಥವಾ ಜಿಲ್ಲಾ/ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News