×
Ad

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

Update: 2025-06-19 18:06 IST

ಮಂಗಳೂರು: ಪ್ರಸಕ್ತ (2025-26ನೇ) ಸಾಲಿನಲ್ಲಿ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ಸಮುದಾಯದ BSC NUSRING ಮತ್ತು GNM NURSING ಕೋರ್ಸ್‌ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಮೂಲಕ ಆನ್‌ಲೈನ್‌ನಲ್ಲಿ ಸೆಪ್ಟಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯ 2.50 ಲಕ್ಷ ರೂ. ಮೀರಿರಬಾರದು. ವಿದ್ಯಾರ್ಥಿಗಳು ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಹಾಗೂ ಎನ್‌ಪಿಸಿಐ ಮ್ಯಾಪಿಂಗ್ ಆಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.

ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ ವೀಕ್ಷಿಸಬಹುದು ಅಥವಾ ಜಿಲ್ಲಾ/ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News