ಎಂಸಿಸಿ ಬ್ಯಾಂಕ್ ಶಾಖೆಗಳ ವಿಸ್ತರಣೆಯ ಮೂಲಕ ಗ್ರಾಹಕ ಸೇವೆ ವಿಸ್ತರಣೆ: ಅನಿಲ್ ಲೋಬೊ
ಮಂಗಳೂರು: ಎಂಸಿಸಿ ಬ್ಯಾಂಕ್ ತನ್ನ ಶಾಖೆಗಳನ್ನು ವಿಸ್ತರಿಸುವುದರ ಜೊತೆ ಗ್ರಾಹಕರ ಸೇವಾ ಸೌಲಭ್ಯ ಗಳನ್ನು ವಿಸ್ತರಿಸಿದೆ ಎಂದು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ.
ಅವರು ಎಂಸಿಸಿ ಬ್ಯಾಂಕ್ ವತಿಯಿಂದ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ಹಮ್ಮಿಕೊಂಡ ‘ಎನ್ ಆರ್ ಐ ಗಳ ಜೊತೆ (ಅಂತರ್ದೃಷ್ಟಿ ಮತ್ತು) ಸಂವಾದ’ ಕಾರ್ಯ ಕ್ರಮದ ಅಧ್ಯಕ್ಷ ತೆವಹಿಸಿ ಮಾತ ಮಾಡುತ್ತಿದ್ದರು. ಅವರು ಬ್ಯಾಂಕ್‌ನ ಪ್ರಗತಿ, ಅಧ್ಯಕ್ಷ ಸ್ಥಾನ ಸ್ವೀಕರಿಸುವ ಮೊದಲು ಹಾಗೂ ನಂತರದ ಸ್ಥಿತಿ ಮತ್ತು ಆ ವರ್ಷ ಗಳಲ್ಲಿ ಕಂಡ ಅಭಿವೃದ್ಧಿಯ ಕುರಿತು ವಿವರಿಸಿದರು. ಅವರು ಎಂಸಿಸಿ ಬ್ಯಾಂಕ್‌ನ ಇತಿಹಾಸವನ್ನು ಸವಿವರವಾಗಿ ವಿವರಿಸಿದರು. ಜೊತೆಗೆ ಹೊಸ ಶಾಖೆಗಳ ಸ್ಥಾಪನೆ ಮತ್ತು ಆನ್‌ಲೈನ್ ಹಾಜರಾತಿ ಮೂಲಕ ಬ್ಯಾಂಕ್ ವಿಸ್ತರಣೆಯ ಭವಿಷ್ಯ ಯೋಜನೆಗಳನ್ನೂ ಹಂಚಿಕೊಂಡರು.
ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು ಮೂಲದ ವ್ಯಕ್ತಿ ಡಯಾನ್ ಡಿಸೋಜಾ ಸಂವಾದ ಕಾರ್ಯ ಕ್ರಮವನ್ನು ನಡೆಸಿದರು. ಮಂಗಳೂರಿನ ದಾಯ್ಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಸಮುದಾಯವನ್ನು ಒಂದು ಗುರಿಯತ್ತ ಒಗ್ಗೂಡಿಸುವ ಮಹತ್ವದ ಕುರಿತು ಮಾತನಾಡಿದರು.
ಸಮಾರಂಭದಲ್ಲಿ ಜೋಸೆಫ್ ಮಾಥಾಯಸ್, ಸ್ಟೀಫನ್ ಮಿನೇಜಸ್ ಸೇರಿದಂತೆ ದುಬೈಯ ವಿವಿಧ ಉದ್ಯಮಿಗಳು, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದ ಸ್ವಯಂಸೇವಕರ ಜೊತೆ ಸಂವಾದ ನಡೆಯಿತು.ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರೋಶನ್ ಡಿಸಿಲ್ವಾ ಕಾರ್ಯಕ್ರಮ ನಿರೂಪಿಸಿ ಆಲ್ವಿನ್ ಪಿಂಟೊ ವಂದಿಸಿದರು.