ದ.ಕ.ಕಾಂಗ್ರೆಸ್ ಮುಖಂಡರಿಂದ ಸಚಿವ ಝಮೀರ್ ಅಹ್ಮದ್ ಭೇಟಿ; ಅಹವಾಲು ಸಲ್ಲಿಕೆ
ಮಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಅವರ ನೇತೃತ್ವದ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ನಿಯೋಗವು ಅಲ್ಪಸಂಖ್ಯಾತ ಹಜ್, ವಕ್ಫ್ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಮತ್ತು ವಿಧಾನ ಪರಿಷತ್ ಸದಸ್ಯರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್ ಅವರನ್ನು ಬುಧವಾರ ಬೆಂಗಳೂರಿನ ಅವರ ಕಚೇರಿಯಲ್ಲಿ ಭೇಟಿಯಾಯಿತು.
ನಿಯೋಗವು ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಅಮಾಯಕ ಅಶ್ರಫ್ ವಯನಾಡ್ ಮತ್ತು ರಹ್ಮಾನ್ ಕೊಳತ್ತಮಜಲ್ ಅವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡ ಬೇಕು, ಕೊಲೆಯ ಹಿಂದೆ ಇರುವ ನೈಜ ಆರೋಪಿಗಳನ್ನು ಯುಎಪಿಎ ಕಾನೂನಿಗೊಳಪಡಿಸಿ ಕೂಡಲೇ ಬಂಧಿಸಬೇಕು. ತಾವುಗಳು ಶೀಘ್ರವೇ ಜಿಲ್ಲೆಗೆ ಆಗಮಿಸಿ ಶಾಂತಿ ಸಭೆ ನಡೆಸಿ ಅಲ್ಪಸಂಖ್ಯಾತರಿಗೆ ದೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಮನವಿ ಮಾಡಿತು.
ಈ ಸಂದರ್ಭದಲ್ಲಿ ಶಾಸಕರಾದ ಯಾಸಿರ್ ಪಠಾಣ್ ಮತ್ತು ಬಲ್ಕಿಶ್ ಬಾನು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಾಹುಲ್ ಹಮೀದ್ ಕೆ.ಕೆ., ಜಿಲ್ಲಾ ಕೋಶಾಧಿಕಾರಿ ಮೊಹಮದ್ ಬಪ್ಪಳಿಗೆ, ದಕ್ಷಿಣ ಕನ್ನಡ ಮುಸ್ಲಿಂ ಜನಪ್ರಧಿನಿಧಿಗಳ ಒಕ್ಕೂಟದ ಅಧ್ಯಕ್ಷರಾದ ಸಿರಾಜ್ ಬಜ್ಪೆ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಶಬೀರ್ ಸಿದ್ದಕಟ್ಟೆ ಬಜ್ಪೆ, ಮುಡಾ ಸದಸ್ಯರಾದ ಜಲೀಲ್, ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗದ ಕಾರ್ಯದರ್ಶಿ ಶಮೀರ್ ಕಾಟಿಪಳ್ಳ, ಮುಸ್ಲಿಂ ಐಕ್ಯತೆ ವೇದಿಕೆಯ ಅಧ್ಯಕ್ಷರಾದ ಅಶ್ರಫ್ ಬದ್ರಿಯಾ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಅಬೂಬಕ್ಕರ್ ಐಡಿಯಲ್, ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ ಶಾಯಿರ್ ಅಬ್ಬಾಸ್, ಜಿಲ್ಲಾ ಅರೋಗ್ಯ ಸಮಿತಿಯ ಸದಸ್ಯರಾದ ಕರೀಂ ಗೇರುಕಟ್ಟೆ, ದಕ್ಷಿಣ ಕನ್ನಡ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಬೀಬ್ ಕಣ್ಣೂರು, ಬೆಳ್ತಂಗಡಿ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಅಯೂಬ್ ಡಿ.ಕೆ., ಕಾಜೂರು ದರ್ಗಾ ಸಮಿತಿಯ ಕಾರ್ಯದರ್ಶಿ ಕಾಂಗ್ರೆಸ್ ಮುಖಂಡರಾದ ಸಿದ್ದಿಕ್, ಜಲೀಲ್ ಕೃಷ್ಣಾಪುರ, ಸುಲೈಮಾನ್ ಕರಾಯ ಮೊದಲಾದವರು ಇದ್ದರು.