ವನಿತಾ ಪಾರ್ಕ್‌ನಲ್ಲಿ ಯೋಗ ದಿನಾಚರಣೆ
Update: 2025-06-22 18:54 IST
ಮಂಗಳೂರು , ಜೂ. 22: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ವತಿಯಿಂದ ದೇವಿಕಾ ಯೋಗ ಕೇಂದ್ರ ಮತ್ತು ಗ್ಲೋಬಲ್ ಇಕೋ ಗ್ರೀನ್ ಫೌಂಡೇಶನ್ ಸಹಯೋಗದಲ್ಲಿ ನಗರದ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್ ನಲ್ಲಿ ಅಂತರ್‌ರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ನಿವೃತ್ತ ಅಪರ ಜಿಲ್ಲಾಧಿಕಾರಿ ಎಸ್.ಎ.ಪ್ರಭಾಕರ ಶರ್ಮ, ರೆಡ್ ಕ್ರಾಸ್ ದ.ಕ.ಜಿಲ್ಲಾ ಆಡಳಿತ ಮಂಡಳಿ ನಿರ್ದೇಶಕ ಪಿ.ಬಿ.ಹರೀಶ್ ರೈ,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿದ್ದರು.
ದೇವಿಕಾ ಯೋಗ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ್ , ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ನಿಯೋಜಿತ ಅಧ್ಯಕ್ಷ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.