×
Ad

ತಾಯಿಯ ನೆನಪಿನಲ್ಲಿ ಒಂದು ಗಿಡ| ಪಡುಬಿದ್ರಿಯಲ್ಲಿ ವನಮಹೋತ್ಸವಕ್ಕೆ ಚಾಲನೆ

Update: 2025-06-23 21:14 IST

ಪಡುಬಿದ್ರಿ: ಕೇಂದ್ರ ಸರಕಾರದ ಯೋಜನೆಯಾದ "ತಾಯಿಯ ನೆನಪಿನಲ್ಲಿ ಒಂದು ಗಿಡ ಎಂಬ ಅಭಿಯಾನ ದಡಿ ಗಿಡ ನೆಟ್ಟು ಅದನ್ನು ಪೊಷಿಸಿ ಬೆಳೆಸಿ ಉತ್ತಮ ಪರಿಸರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈ ಮಹತ್ತರ ಯೋಜನೆಯನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಕೈಗೊಂಡಿದೆ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ವೈ ಸುಧೀರ್ ಕುಮಾರ್ ಹೇಳಿದರು.

ಅವರು ಸೋಮವಾರ ಅಂತರಾಷ್ಟ್ರೀಯ ಸಹಕಾರಿ ವರ್ಷ-2025 ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ.ಸೊಸೈಟಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವಿವಿದೆಢೆಗಳಲ್ಲಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಣ್ಣಂಗಾರು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಧ್ಯಕ್ಷ ಶೀನ ಪೂಜಾರಿ ಚಾಲನೆ ನೀಡಿದರು. "ತಾಯಿಯ ನೆನಪಿನಲ್ಲಿ ಒಂದು ಗಿಡ" ಅಭಿಯಾನದಡಿ ನಡೆದಿದ್ದು ತರಂಗಿಣಿ ಮಿತ್ರ ಮಂಡಳಿ (ರಿ) ಮಧ್ವನಗರ, ಪಡುಬಿದ್ರಿ ಇವರ ಸಹಕಾರದೊಂದಿಗೆ ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್, ಹೆಜಮಾಡಿಯ ಸರಕಾರಿ ಫ್ರೌಢ ಶಾಲೆ, ಪಲಿಮಾರಿನ ಸರಕಾರಿ ಫ್ರೌಢ ಶಾಲೆ, ತೆಂಕ ಎರ್ಮಾಳಿನ ಸರಕಾರಿ ಫ್ರೌಢ ಶಾಲೆಯಲ್ಲಿ ಸಸಿ ನೆಡಲಾಯಿತು.

ಸೊಸೈಟಿಯ ನಿರ್ದೇಶಕರಾದ ಗಿರೀಶ್ ಪಲಿಮಾರು, ಕೃಷ್ಣ ಬಂಗೇರ, ಮಾಧವ ಆಚಾರ್ಯ, ರೋಹಿಣಿ ಎ., ಕುಸುಮಾ ಕರ್ಕೇರ, ಶಿವರಾಮ ಎನ್ ಶೆಟ್ಟಿ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಎಚ್.ಪುತ್ರನ್ ಉಪಸ್ಥಿತರಿದ್ದರು. ನಿಖಿಲ್ ಪೂಜಾರಿ ನಿರೂಪಿಸಿ, ವಂದಿಸಿದರು.

ಬೀಚ್ ಸ್ವಚ್ಚತಾ ಕಾರ್ಯಕ್ರಮ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯು ಸಹಕಾರ ಸಪ್ತ ಸಂಭ್ರಮಾಚರಣೆಯ ಪ್ರಯುಕ್ತ ಮೊದಲ ದಿನದಂದು ಸುಂದರ ಕಡಲ ಕಿನಾರೆಯಲ್ಲಿ ಶುಚಿತ್ವ ಕಾಪಾಡುವ ನೆಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಪರಿಸರ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದೆ.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಚಾಲನೆ ನೀಡಿದರು. ಬೆಳಿಗ್ಗೆ 8 ಗಂಟೆ ಯಿಂದ ಆರಂಭವಾದ ಸ್ವಚ್ಛತಾ ಕಾರ್ಯ ಹೆಜಮಾಡಿ ಕರಾವಳಿ ಯುವಕ ಯುವತಿ ವೃಂದದ ಸಹ ಯೋಗದಲ್ಲಿ ಹೆಜಮಾಡಿ ಬೀಚ್, ಪಡುಬಿದ್ರಿ ಕರಾವಳಿ ಸ್ಟಾರ್ ನಡಿಪಟ್ನ ಮತ್ತು ಯುವವಾಹಿನಿ ಪಡುಬಿದ್ರಿ ಘಟಕದ ಸಹಯೋಗದೊಂದಿಗೆ ಪಡುಬಿದ್ರಿ ಬೀಚ್, ತೆಂಕ ಕರಾವಳಿ ಫ್ರೆಂಡ್ಸ್ ಸಹಯೋಗದೊಂದಿಗೆ ತೆಂಕ ಎರ್ಮಾಳ್ ಬೀಚ್ ಬಳಿ ಸ್ವಚ್ಚತಾ ಕಾರ್ಯಕ್ರಮ ಜರಗಿತು.

ಈ ಸಂದರ್ಭ ಪಡುಬಿದ್ರಿ ಸಿ.ಎ.ಸೊಸೈಟಿ ಅಧ್ಯಕ್ಷರಾದ ವೈ ಸುಧೀರ್ ಕುಮಾರ್, ನಿರ್ದೇಶಕರಾದ ಗಿರೀಶ್ ಪಲಿಮಾರು, ಕೃಷ್ಣ ಬಂಗೇರ, ಮಾಧವ ಆಚಾರ್ಯ, ರೋಹಿಣಿ ಎ., ಕುಸುಮಾ ಕರ್ಕೇರ, ಶಿವರಾಮ ಎನ್ ಶೆಟ್ಟಿ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಎಚ್.ಪುತ್ರನ್ ಉಪಸ್ಥಿತರಿದ್ದರು.

ಪಡುಬಿದ್ರಿ ಸಿ.ಎ.ಸೊಸೈಟಿ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಸ್ವಾಗತಿಸಿದರು. ನಿಖಿಲ್ ಪೂಜಾರಿ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News