×
Ad

ಮಕ್ಕಳಿಗೆ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಅರ್ಜಿ ಆಹ್ವಾನ

Update: 2025-06-23 21:26 IST

ಮಂಗಳೂರು,ಜೂ.23: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವಾಲಯ, ಭಾರತ ಸರಕಾರ ಇವರು 2025ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಮಟ್ಟದಲ್ಲಿ ಜುಲೈ 31 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಆದ್ದರಿಂದ ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಅವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಅರ್ಜಿಯನ್ನು

ಆನ್‌ಲೈನ್ ಪೋರ್ಟಲ್ ಮೂಲಕ ಸಲ್ಲಿಸಬೇಕು. ಮಕ್ಕಳ ಮಾಹಿತಿಯು ದೊರೆತಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದೂರವಾಣಿ ಸಂಖ್ಯೆ 0824-2440004 ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News