×
Ad

ಉಜಿರೆ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Update: 2025-06-24 21:58 IST

ಬೆಳ್ತಂಗಡಿ: ಉಜಿರೆ ಪೇಟೆಯಲ್ಲಿ ಮಂಗಳವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರ ಉಜಿರೆ ಪೇಟೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಗ್ರಾಮಪಂಚಾಯತ್ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಮಾರು 45‌ ರಿಂದ 50 ವರ್ಷ ಪ್ರಯಾದ ವ್ಯಕ್ತಿಯ ಮೃತದೇಹ ಇದಾಗಿದ್ದು ಎಡ ಕೈಯಲ್ಲಿ G MAHESH ಎಂದೂ ಬಲ ಕೈಯಲ್ಲಿ ABGTK ಎಂದೂ ಬರೆಯಲಾಗಿದೆ.

ಮೃತರ ವಾರಿಸುದಾರರು ಇದ್ದಲ್ಲಿ ಬೆಳ್ತಂಗಡಿ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News